ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶಿಕ್ಷಕ ಶ್ರೀ ಮುತ್ತು ವಡ್ಡರ ರಾಜ್ಯಮಟ್ಟದ ಚಾಲುಕ್ಯ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆ

ಬಾಗಲಕೋಟೆ:ವಿಶ್ವ ಬಂಜಾರ ಕಲಾ ಸಾಹಿತ್ಯ ಸಂಘ (ರಿ.) ಅಮೀನಗಡ ಹಾಗೂ ಬರಹವೇ ಶಕ್ತಿ ವೇದಿಕೆಯ ವತಿಯಿಂದ ಹುನಗುಂದ ತಾಲೂಕಿನ ಐಹೊಳೆಯಲ್ಲಿ ದಿನಾಂಕ 07-07-2024 ರವಿವಾರ ದಂದು ನಡೆಯುತ್ತಿರುವ ಪ್ರಥಮ ಚಾಲುಕ್ಯ ಸಾಹಿತ್ಯ ಸಮ್ಮೇಳನ ಹಾಗೂ ಬಹು ಭಾಷಾ ಕವಿಗೋಷ್ಠಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಕಾಂತ ಚವಾಣ್ ರವರು ಪತ್ರಿಕಾಗೋಷ್ಠಿಗೆ ತಿಳಿಸಿದ್ದಾರೆ.
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ನಿವಾಸಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಉದಯೋನ್ಮುಖ ಕವಿ, ಶಿಕ್ಷಕರಾಗಿರುವ ಶ್ರೀ ಮುತ್ತು ಯ. ವಡ್ಡರ ರವರು ಹಲವಾರು ಸಾಹಿತ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಇವರ ಕನ್ನಡ ಸಾಹಿತ್ಯ ಸೇವೆಯನ್ನು ಗುರುತಿಸಿ ಪ್ರಪ್ರಥಮ ರಾಜ್ಯಮಟ್ಟದ ಚಾಲುಕ್ಯ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರಾಗಿರುವ ಚಂದ್ರಕಾಂತ ಚವಾಣ್ ಹಾಗೂ ರಾಜ್ಯಾಧ್ಯಕ್ಷರಾಗಿರುವ ಎಚ್ ವೈ ರಾಠೋಡ್ ರವರು ತಿಳಿಸಿದ್ದಾರೆ.
ಶ್ರೀ ಮುತ್ತು ಯ. ವಡ್ಡರ ರವರು ಶಿಕ್ಷಕ ವೃತ್ತಿಯ ಜೊತೆಗೆ ಕಥೆ ಕವನ ಲೇಖನಗಳು ಸೇರಿ ಸಾಹಿತ್ಯದ ಹಲವಾರು ಚಟುವಟಿಕೆಗಳಲ್ಲಿ ಭಾಗವಹಿಸಿರುವರು. ನಾಡಿನ 50 ಜನ ಸಾಧಕರ ಪರಿಚಯವಿರುವ ಎಲೆ ಮರೆ ಕಾಯಿಗಳು ಎಂಬ ಪುಸ್ತಕವನ್ನು ಇತ್ತೀಚೆಗೆ ಮೈಸೂರಿನಲ್ಲಿ ಬಿಡುಗಡೆ ಮಾಡಿದ್ದಾರೆ. 2023-24 ರ ಹುನಗುಂದ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಇವರು ಪ್ರತಿನಿತ್ಯ 4000 ಕ್ಕೂ ಹೆಚ್ಚು ಜನರಿರುವ ಜ್ಞಾನಜ್ಯೋತಿ ದಿನಂಪ್ರತಿ ಎಂಬ ವ್ಯಾಟ್ಸಪ್ ಬಳಗದಲ್ಲಿ ದಿನವೂ ಒಂದೊಂದು ವಿಷಯಕ್ಕೆ ಸಂಬಂಧಿಸಿದ ಹಾಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ. ಕವನಗಳು ಚುಟುಕುಗಳು ಹೈಕುಗಳು ತನಗಗಳು ರೂಬಾಯಿಗಳು ಸಣ್ಣ ಕಥೆಗಳ ಜೊತೆಗೆ ನಾಡಿನ ಹಲವಾರು ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ. ಇದುವರೆಗೂ ಸುಮಾರು 15 ರಿಂದ 16 ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವ ಇವರ ಕನ್ನಡ ಸಾಹಿತ್ಯ ಸೇವೆ ಹೀಗೆ ಇರಲೆಂದು ವಿಶ್ವ ಬಂಜಾರ ಕಲಾ ಸಾಹಿತ್ಯ ಸಂಘ ಹಾಗೂ ಬರಹವೇ ಶಕ್ತಿ ವೇದಿಕೆಯಿಂದ ಹಾರೈಸಿದ್ದಾರೆ. ರಾಜ್ಯಮಟ್ಟದ ಚಾಲುಕ್ಯ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ಇವರಿಗೆ ಸಮಸ್ತ ಶಿಕ್ಷಕ ಬಳಗ ಕುಟುಂಬ ವರ್ಗ ಹಾಗೂ ಸ್ನೇಹ ಬಳಗ ಮತ್ತು ಊರಿನ ಗಣ್ಯಮಾನ್ಯರು ಪ್ರೋತ್ಸಾಹದ ಸಂತಸ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ