ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಮೊಗ್ಗದಲ್ಲೊಂದು ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ ನಿರ್ಮಾಣ/ಶಾಸಕ ಡಿ.ಎಸ್.ಅರುಣ್ ಅವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಭರವಸೆ

ಶಿವಮೊಗ್ಗ:ರಾಜ್ಯಮಟ್ಟದ ಸ್ಕೇಟಿಂಗ್ ರೋಡ್ ರೇಸ್ ಕ್ರೀಡಾಕೂಟಕ್ಕೆ ಚಾಲನೆ

ಶಿವಮೊಗ್ಗ ನಗರದಲ್ಲಿ ವ್ಯವಸ್ಥಿತವಾದ ಸ್ಕೇಟಿಂಗ್ ಕ್ರೀಡಾಂಗಣ ಇಲ್ಲ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯನ್ನು ನಡೆಸಲು ಕನಿಷ್ಠ 200 ಮೀಟರ್ ವಿಸ್ತೀರ್ಣದ ಅತ್ಯಂತ ವ್ಯವಸ್ಥಿತ ಸ್ಕೇಟಿಂಗ್ ಕ್ರೀಡಾಂಗಣ ಅಗತ್ಯ ಎಂದು ಕೇಳಿದ ಬೇಡಿಕೆಗೆ ಆ ಕ್ಷಣದಲ್ಲೇ ಸಂಸದ ಬಿ.ವೈ. ರಾಘವೇಂದ್ರ ಅಸ್ತು ಎಂದರು.
ಇಂದು ಶಿವಮೊಗ್ಗ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಶಿವಮೊಗ್ಗದ ನಮ್ ರೂಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ರೋಡ್ ರೇಸ್ ಸ್ಕೇಟಿಂಗ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ನಾಲ್ಕನೇ ಬಾರಿ ಶಿವಮೊಗ್ಗ ಜಿಲ್ಲೆಯ ಜನತೆ ಲೋಕಸಭಾ ಕ್ಷೇತ್ರದಲ್ಲಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ನಮ್ಮ ಮುಖ್ಯ ಉದ್ದೇಶ. ನಾನು ನಾಲ್ಕನೇ ಬಾರಿ ಸಂಸದನಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಷಣದಿಂದ ಈಗಾಗಲೇ ರಸ್ತೆ, ರೈಲು, ವಿಮಾನ, ಶಿಕ್ಷಣ ವಿಷಯಕ್ಕೆ ಸಂಬಂಧಪಟ್ಟಂತೆ ಹಲವಾರು ಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಈಗ ಕ್ರೀಡಾ ಸಚಿವರನ್ನು ಭೇಟಿ ಮಾಡಿ ಶಿವಮೊಗ್ಗದಲ್ಲಿ ಅತ್ಯಂತ ವ್ಯವಸ್ಥಿತವಾದ ಕ್ರೀಡಾಂಗಣವನ್ನು ಮಾಡಿಸಿ ಕೊಡುವುದು ನನ್ನ ಕರ್ತವ್ಯ ಎಂದು ಹೇಳಿದರು.
ವಿಧಾನ ಪರಿಷತ್ ಶಾಸಕ ಡಿಎಸ್ ಅರುಣ್ ಅವರು ಸದ್ಯದಲ್ಲೇ ನಡೆಯಲಿರುವ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಜಾಗದ ವ್ಯವಸ್ಥೆಯನ್ನು ಮಾಡುವ ನಿಟ್ಟಿನಲ್ಲಿ ಚರ್ಚಿಸಲಿದ್ದಾರೆ. ನಾನು ಕೇಂದ್ರ ಸರ್ಕಾರದಿಂದ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಅಗತ್ಯವಿರುವ ಅನುದಾನವನ್ನು ತರುತ್ತೇನೆ. ನನಗೆ ಈ ಬಗ್ಗೆ ವಿಶ್ವಾಸವಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲ ಬಗೆಯ ಅಭಿವೃದ್ಧಿಗಳಿಗೆ ನಾನು ಸದಾ ಸಕ್ರಿಯನಾಗಿರುತ್ತೇನೆ ಎಂದರು.
ಕ್ರೀಡೆ ಅತ್ಯಂತ ಅಗತ್ಯದ ಚಟುವಟಿಕೆ. ಇದರಿಂದ ಮಾನಸಿಕ ನೆಮ್ಮದಿಯ ಜೊತೆ ಮಕ್ಕಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣವನ್ನು ನಿರ್ಮಿಸುತ್ತದೆ ಇಂದಿನ ಪೋಷಕರು ಮಕ್ಕಳನ್ನು ಇಂತಹ ವಾತಾವರಣದಲ್ಲಿ ಕ್ರೀಡಾ ಆಸಕ್ತಿಯನ್ನು ಪ್ರೋತ್ಸಾಹಿಸಿ ಬೆಳೆಸುತ್ತಿರುವುದು ಸಂತೋಷದ ವಿಷಯ ಎಂದರು ಈಗಾಗಲೇ ಭೂ ಸಾರಿಗೆ ರೈಲ್ವೆ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಶಿವಮೊಗ್ಗಕ್ಕೆ ಅಗತ್ಯವಿರುವಂತಹ ಎಲ್ಲಾ ಸೌಕರ್ಯಗಳನ್ನು ಪಡೆಯಲು ಮಾತನಾಡಿದ್ದೇನೆ. ಇಂದಿನಿಂದಲೇ ಅತ್ಯಂತ ಸುಸಜ್ಜಿತವಾದ ಸ್ಕೇಟಿಂಗ್ ಅಂಕಣವನ್ನು ನಿರ್ಮಿಸಲು ಅಗತ್ಯವಾದ ವ್ಯವಸ್ಥೆಗಳನ್ನು ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಅವರು ಮಾತನಾಡುತ್ತಾ ಸಂಸದರು ತಮ್ಮ ಕೋರಿಕೆಯನ್ನು ಖಂಡಿತ ಈಡೇರಿಸುತ್ತಾರೆ. ಏನು ಇಲ್ಲದ ಶಿವಮೊಗ್ಗ ಇಂದು ಇಡೀ ದೇಶದಲ್ಲಿ ಗುರುತಿಸಿಕೊಳ್ಳುವಂತಾಗಿದೆ. ಮೊದಲು ಕೇವಲ ನಾಲ್ಕು ರೈಲುಗಳು ಶಿವಮೊಗ್ಗಕ್ಕೆ ಬರುತ್ತಿದ್ದವು. ಈಗ ಅವುಗಳ ಸಂಖ್ಯೆ 38ಕ್ಕೆ ಏರಿದೆ. ವಿಮಾನ ನಿಲ್ದಾಣ ಆಗಿದೆ ಶಿವಮೊಗ್ಗಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ನಾನು ನಾಳೆ ನಡೆಯಲಿರುವ ಸೂಡ ಸಭೆಯಲ್ಲಿ ವಾಜಪೇಯಿ ಬಡಾವಣೆಯಲ್ಲಿನ ಅತ್ಯಂತ ವ್ಯವಸ್ಥಿತವಾದ 200 ಮೀ ಅಳತೆಯ ಸ್ಕೇಟಿಂಗ್ ಟ್ರ್ಯಾಕ್ ನಿರ್ಮಿಸಲು ಜಾಗವನ್ನು ಪಡೆಯುವ ಬಗ್ಗೆ ಮಾತನಾಡುತ್ತೇನೆ. ರಾಘಣ್ಣ ಕೇಂದ್ರ ಸರ್ಕಾರದಿಂದ ಸುಂದರ ಅಂಕಣವನ್ನು ನಿರ್ಮಿಸಲು ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಇಂದೂಧರ್ ಸೀತಾರಾಮ ಅವರು ಮಾತನಾಡುತ್ತಾ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಈಗಾಗಲೇ ಕ್ರೀಡಾಪಟುಗಳು ಶಿವಮೊಗ್ಗಕ್ಕೆ ಆಗಮಿಸಿದ್ದು, ರಾಜ್ಯಮಟ್ಟದ ಅತ್ಯಂತ ವ್ಯವಸ್ಥಿತವಾದ ಪಂದ್ಯಾವಳಿ ಇದಾಗಿದೆ. ಶಿವಮೊಗ್ಗದಲ್ಲಿ ವ್ಯವಸ್ಥಿತವಾದ ಕ್ರೀಡಾಂಗಣ ಒಂದನ್ನು ನಿರ್ಮಿಸಲು ಮಾನ್ಯ ಸಂಸದರು ನೆರವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ನಮ್ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಮೋಹನ್ ಕುಮಾರ್ ಪ್ರಧಾನ ಕಾರ್ಯದರ್ಶಿ ಎಂ ರವಿ ಹಾಗೂ ಕರ್ನಾಟಕ ರಾಜ್ಯ ರೋರಲ್ ಕೇಟಿಂಗ್ ಅಸೋಸಿಯೇಷನ್ ಪ್ರಮುಖರು ಮತ್ತು ಅಂತರಾಷ್ಟ್ರೀಯ ಮಟ್ಟದ ತರಬೇತಿ ಪಡೆದ ಅಂಪೈರ್ ಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರತಿಭಾನ್ವಿತ ಸ್ಕೇಟಿಂಗ್ ಪಟುಗಳನ್ನು ಸನ್ಮಾನಿಸಲಾಯಿತು. ವಕೀಲ ಪ್ರವೀಣ್ ಅವರು ಸ್ವಾಗತಿಸಿದರು ಸಮನ್ವಯ ಕಾಶಿ ಕಾರ್ಯಕ್ರಮ ನಿರೂಪಿಸಿದರು. ನಾಳೆಯೂ ಸಹ ಪಂದ್ಯಾವಳಿ ಮುಂದುವರೆಯಲಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ