ಬೆಂಗಳೂರು:ಇಲಾಖೆಯಡಿ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಹಂತ 2 ರ ಅಡಿ ₹ 2 ಸಾವಿರ ಕೋಟಿ ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
₹ 2 ಸಾವಿರ ಕೋಟಿ ಯೋಜನಾ ಅಂದಾಜಿನಲ್ಲಿ ರಾಜ್ಯ ಸರ್ಕಾರದ ಪಾಲಿನ ಶೇ.7.5 ರಷ್ಟು ಮೊತ್ತ ಅಂದರೆ ₹ 150 ಕೋಟಿ, ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ.7.5 ರಷ್ಟು ಮೊತ್ತ ₹ 150 ಕೋಟಿ ಹಾಗೂ ಯುಐಡಿಎಫ್‌ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ ₹1,700 ಕೋಟಿಯಲ್ಲಿ 2024-25ನೇ ಸಾಲಿನಿಂದ 2026-27ನೇ ಸಾಲಿನವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ