ಬಾಗಲಕೋಟೆ/ಬೀಳಗಿ:ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ. ಸಶಕ್ತ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವೈದ್ಯರ ಪರಿಶ್ರಮ ದೊಡ್ಡದು. ಮನುಷ್ಯ ಸಾವು ಬದುಕಿನ ಮಧ್ಯ ಹೋರಾಡುವಂತ ಸಮಯದಲ್ಲಿ ವೈದ್ಯರನ್ನು ದೇವತಾ ರೂಪದಲ್ಲಿ ಕಾಣುತ್ತೇವೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರಮನ್ ಎಸ್.ಆರ್.ಪಾಟೀಲ್ ಹೇಳಿದರು.
ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ ಡಾ.ಬಿಧನ ಚಂದ್ರರಾಯ ಗೌರವದ ದಿನವಾದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯರ ಅಮೂಲ್ಯವಾದ ಸೇವೆ ಸದಾ ಕಾಲ ಇರಬೇಕು. ನಮ್ಮ ರಾಷ್ಟçದ ಅಭಿವೃದ್ಧಿ ಜನತೆಯ ಆರೋಗ್ಯದಲ್ಲಿ ಅವಲಂಬಿಸಿದೆ ಎಂದರು.
ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಕಾರ್ಯದರ್ಶಿ ಎಂ.ಎನ್.ಪಾಟೀಲ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು. ಇದು ಅಷ್ಟೇ ಸತ್ಯವೂ ಕೂಡಾ. ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ, ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಾಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನ ದೇವರಿಗೆ ಹೋಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಅನಾರೋಗ್ಯಕ್ಕೆ ತುತ್ತಾದ ಪ್ರತಿಯೋಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪುನರ್ಜನ್ಮ ನೀಡುವ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಪ್ರತಿ ವರ್ಷ ಜುಲೈ ೧ ರಂದು ರಾಷ್ಟ್ರೀಯ ವೈದ್ಯರ ದಿನವನ್ನ ಆಚರಿಸಲಾಗುತ್ತದೆ ಎಂದರು.
ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ದಯಾನಂದ ಪಾಟೀಲ, ವೈದ್ಯಕೀಯ ಕಾಲೇಜ್ ಡೀನ್ ಧರ್ಮರಾಯ ಇಂಗಳೆ, ವೈದ್ಯಕೀಯ ಅಧೀಕ್ಷಕ ಡಾ.ವಿಜಯಾನಂದ ಹಳ್ಳಿ, ವೈದ್ಯಕೀಯ ನಿರ್ದೇಶಕ ಡಾ.ರಾಘವೇಂದ್ರ ಪಾಟೀಲ ಮತ್ತಿತರರು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.