ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಹು ಮಹಾರಾಜ್ ಜಯಂತಿ ಹಾಗೂ ಡಾ.ಅಂಬೇಡ್ಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೀದರ್:ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಬೀದರ ವತಿಯಿಂದ ಮೀಸಲಾತಿಯ ಜನಕ ಶಾಹು ಮಹಾರಾಜರ ಜಯಂತ್ಯೋತ್ಸವ ಹಾಗೂ ಡಾ.ಬಿ.ಆರ್ ಅಂಬೇಡ್ಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ ಪೂಜಾರಿ ಅವರು ನೆರವೇರಿಸಿದರು. ಅಧ್ಯಕ್ಷತೆಯನ್ನು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕರಾದ ಸಂದೀಪ ಕಾಂಟೆ ಅವರು ವಹಿಸಿದ್ದರು, ಕಾರ್ಯಕ್ರಮದ ವಿಶೇಷ ಭಾಷಣವನ್ನು ನಿವೃತ್ತ ಪ್ರಾಂಶುಪಾಲರು ವಿಚಾರವಾದಿಗಳಾದ ವಿಠ್ಠಲದಾಸ ಪ್ಯಾಗೆ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಹಾಗೂ ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 85%ಕ್ಕಿಂತ ಹೆಚ್ಚು ಫಲಿತಾಂಶ ತೆಗೆದ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಭಾ ಪುರಸ್ಕಾರ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಭಾಷ ನಾಗೂರೆ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬಾಬುರಾವ ಪಾಸ್ವಾನ, ದಲಿತ ಸೇನೆ ಜಿಲ್ಲಾಧ್ಯಕ್ಷರಾದ ಶ್ರಿಪತರಾವ ದಲಿತ ಸಂಘರ್ಷ ಸಮಿತಿ ಕರ್ನಾಟಕದ ಜಿಲ್ಲಾ ಸಂಚಾಲಕ ಶಿವಕುಮಾರ್ ನೀಲಿಕಟ್ಟಿ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು ಹಾಜರಿದ್ದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!