ಶಿವಮೊಗ್ಗ:ತಾಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಗೆ ಇಂದು ವಿಧಾನಪರಿಷತ್ ಶಾಸಕರು, ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಮತ್ತು ಕುವೆಂಪು ವಿಶ್ವ ವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾದ ಶ್ರೀ ಡಿ ಎಸ್ ಅರುಣ್ ಅವರು ಭೇಟಿ ನೀಡಿ ಗ್ರಾಮ ಪಂಚಾಯಿತಿ ಸದಸ್ಯರ ಅಹವಾಲು ಸ್ವೀಕರಿಸಿದರು.
ಗ್ರಾಮ ಪಂಚಾಯಿತಿಯಲ್ಲಿನ ಈ ಸ್ವತ್ತು ಸಮಸ್ಯೆ, ರಸ್ತೆ ಸಮಸ್ಯೆ, ಬಸ್ ಸಂಚಾರ ಇಲ್ಲದೆ ಇರುವುದರಿಂದ ಶಾಲಾ ಮಕ್ಕಳಿಗೆ ತೊಂದರೆ ಆಗುತ್ತಿರುವುದು. ಜಲ್ ಜೀವನ್ ಮಿಶನ್ ಕಾರ್ಯರೂಪಕ್ಕೆ ಬರದೆ ಇರುವುದು ಹೀಗೆ ಹಲವು ವಿಷಯಗಳ ಕುರಿತು ಸುಧೀರ್ಘವಾಗಿ ಚರ್ಚಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ರಘು, ಸದಸ್ಯರಾದ ನಾಗಲಕ್ಷ್ಮಿ, ಚಂದ್ರನಾಯ್ಕ್, ರಾಧಾ ಬಾಯಿ, ಮೂರ್ತಿ, ಮಂಜನಾಯ್ಕ, ಶ್ರೀಮತಿ ವೇಣಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್, ಗ್ರಾಮಸ್ಥರಾದ ಸಂಜೀವ್ ಕುಮಾರ್, ಶಾಂತ್ ಕುಮಾರ್ ಉಪಸ್ಥಿತರಿದ್ದರು.
ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ



















