ಮಂಡ್ಯ:ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ನೂತನ ಎಸ್‌ಪಿಯಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಬಾಲದಂಡಿ ಪುಡಿ ರೌಡಿಗಳ ಎಡೆಮುರಿ ಕಟ್ಟಲು ಮುಂದಾಗಿದ್ದು ರೌಡಿಸಂ ಹಾಗೂ ಅಕ್ರಮ ಚಟುವಟಿಕೆ ತಡೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪುಡಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಿರುವ ಮಂಡ್ಯ ನೂತನ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ(Mandya New SP Mallikarjuna Baladandi), ರೌಡಿಸಂ ಹಾಗೂ ಅಕ್ರಮ ಚಟುವಟಿಕೆ ತಡೆಗಾಗಿ ಕಾನೂನು ಬಾಹಿರ ಕೃತ್ಯ ನಡೆಸುವವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸಣ್ಣಪುಟ್ಟ ಪುಡಿ ರೌಡಿಗಳು ಹುಡುಗಿಯರ ಚುಡಾಯಿಸುವುದು, ಸಣ್ಣ ಮಟ್ಟದಲ್ಲಿ ಗ್ರಾಮದಲ್ಲಿ ಹವಾ ಮೇಂಟೈನ್ ಮಾಡುವಂತವರು, ಸಾರ್ವಜನಿಕ ಪ್ರದೇಶದಲ್ಲಿ ಭಯ ಹುಟ್ಟಿಸುವುದು. ಇಲ್ಲವೇ, ಲಾಂಗ್, ಮಚ್ಚು, ಹಿಡಿದು ಓಡಾಡುವವರಿಗೆ ರೌಡಿ ಶೀಟ್ ತೆರೆಯಲಾಗುತ್ತದೆ. ಜೊತೆಗೆ ಕಾನೂನಾತ್ಮಕವಾಗಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನೂ ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ನಗರದಲ್ಲಿ ರಾತ್ರಿಯ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ, ಪೆಟ್ರೊಲಿಂಗ್ ವ್ಯವಸ್ಥೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
