ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ಸರ್ಕಾರಿ ಬಾಲಕರ ಫ್ರೌಡಶಾಲೆಯಿಂದ ಉಜ್ಜಿನಿ ಸರ್ಕಲ್, ರೇಣುಕಾ ಟಾಕೀಸ್ ರಸ್ತೆ ಹಾಗೂ ಸಂತೆ ಮಾರುಕಟ್ಟೆ ಮೂಲಕ ಬಸ್ ನಿಲ್ಡಾಣದವರೆಗೆ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ಶಾಲಾ ಮಕ್ಕಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಡೆಂಗ್ಯೂ, ಚಿಕನ್ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಹಾಗೂ ಹೋಟೆಲ್ ಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ, ಶುದ್ದ ಕುಡಿಯುವ ನೀರನ್ನು ಒದಗಿಸುವಂತೆ ತಿಳಿಸಿ,ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ ಜಾಥಾ ನಡೆಸಿ ಜಾಗೃತಿ ಮೂಡಿಸಲಾಯಿತು.
