ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವೇಣುಗೋಪಾಲ ಸ್ವಾಮಿ ವಿದ್ಯಾಪೀಠ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾರಾಯಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಓ ಧನಂಜಯ ರವರ ಅಕಾಲಿಕ ಮರಣದಿಂದಾಗಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾರಾಯಣಪ್ಪ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಂತರ ಅವರು ಮಾತನಾಡಿ, ಅನುದಾನಿತ ಶಾಲೆಯ ಶಿಕ್ಷಕರಿಗೆ ಇರುವ ವೇತನ ಸಮಸ್ಯೆಯನ್ನು ಬಗೆಹರಿಸಲಾಗುವುದೆಂದು,ಸರ್ಕಾರಿ ಶಾಲೆಯ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಬಡ್ತಿ ಸಮಸ್ಯೆ ಮತ್ತು ವೇತನ ಸಮಸ್ಯೆ ಬಗ್ಗೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಖಾಸಗಿ ಶಾಲೆಗಳ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಇಸಿಓ ಶಿವಮೂರ್ತಿ ನಾಯ್ಕ್ ಶಿವಕುಮಾರ್, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ, ರಾಮಚಂದ್ರಪ್ಪ ಖಜಾಂಚಿ , ಉಪಾಧ್ಯಕ್ಷರಾದ ರಾಜಣ್ಣ, ತಿಪ್ಪೇಸ್ವಾಮಿ, ಸಂಘಟನಾ ಕಾರ್ಯದರ್ಶಿಗಳಾಗಿ ರಮೇಶ್, ನಾಗರಾಜು,ಜಿ ವೆಂಕಟೇಶಪ್ಪ, ಶಂಕ್ರಪ್ಪ, ಕಟ್ಟಾ
ನರಸಿಂಹಮೂರ್ತಿ ಇನ್ನು ಹಲವಾರು ಶಿಕ್ಷಕರು ಹಾಜರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.