ಶಿವಮೊಗ್ಗ :ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನವಿಲೆಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕ ಎಸ್‍ಎನ್ ಚನ್ನಬಸಪ್ಪ ಅವರು ಭಾಗವಹಿಸಿ ಕಾರ್ಯಕ್ರಮದ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ 6 ವಿವಿಧ ಹಸ್ತ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಕೆರೆಗೆ ಮೀನು ಮರಿ ಬಿತ್ತನೆ ಮಾಡಿದರು ಹಾಗೂ ವಿಶ್ವವಿದ್ಯಾಲಯದ ಅಲಂಕಾರಿಕ ಮೀನು ಕೃಷಿ ಘಟಕವನ್ನು ವೀಕ್ಷಿಸಿ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಉಡುಪಿ ಕಿನಾರಾ ಮೀನು ಉತ್ಪಾದಕರ ಸಂಸ್ಥೆಯವರು ವಿವಿಧ ಮೀನು ಉತ್ಪನ್ನಗಳನ್ನು ಪ್ರದರ್ಶಿಸಿದರು. ಮೀನು ಆಹಾರ ಮಾರಾಟಗಾರರು ವಿವಿಧ ಮೀನು ಆಹಾರಗಳ ಮಾದರಿಯನ್ನು ಪ್ರದರ್ಶಿಸಿದರು. ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರಾದ ಡಾ. ಹೇಮ್ಲಾನಾಯಕ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ನಿರ್ದೇಶಕರು ಕರ್ನಾಟಕ ರಾಜ್ಯ ಮೀನುಗಾರಿಕೆ ಮಹಾಮಂಡಳಿ ಮೈಸೂರು ಪಿ.ರಾಮಯ್ಯ, ಶಿವಮೊಗ್ಗ ಜಿಲ್ಲೆಯ ಮೀನುಗಾರಿಕೆ ಉಪ ನಿರ್ದೇಶಕರಾದ ಜಿ.ಎಂ ಶಿವಕುಮಾರ್, ಸತೀಶ್ ಎಸ್.ಕೆ. ರಾಘವೇಂದ್ರ ಮೀನುಗಾರಿಕೆ ಉಪ ನಿರ್ದೇಶಕರು (ಕಿರಿಯ ವೇತನ ಶ್ರೇಣಿ) ತರಬೇತಿ ಕೇಂದ್ರ ಬಿಆರ್ ಪ್ರಾಜೆಕ್ಟ್, ಸಹಾಯಕ ಪ್ರಾಧ್ಯಾಪಕ ಡಾ.ಎ.ಹೆಚ್. ಶಾಂತನಗೌಡ ಹಾಗೂ ಜಿಲ್ಲಾದ್ಯಂತ ಎಲ್ಲಾ ಮೀನುಗಾರಿಕೆ ಸಹಕಾರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸದಸ್ಯರು, ಮೀನುಗಾರರು ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ