ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಮಗಾರಿಗಳ ಪರಿಶೀಲನೆ ನಡೆಸಿದಶಾಸಕ ಎಂ.ಆರ್ ಮಂಜುನಾಥ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಮಂಜುನಾಥ್ ಭೇಟಿ ನೀಡಿ ಅಧಿಕಾರಿಗಳ ಜೊತೆ 512 ಕೊಠಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿನ ನಡೆಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಆಗಮನ :
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಪ್ರತಿ ವರ್ಷ ಸಾಮೂಹಿಕ ವಿವಾಹ ಸಾಂಪ್ರದಾಯದಂತೆ ಆಗಸ್ಟ್ ತಿಂಗಳಲ್ಲಿ ನಡೆಯುವ ಸಾಮೂಹಿಕ ವಿವಾಹ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿರುವ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಸಚಿವರು ಶಾಸಕರು ಜಿಲ್ಲಾ ಮಟ್ಟದ ಅಧಿಕಾರಿಗಳು ಬರಲಿದ್ದಾರೆ ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಎಂದು ಸೂಚನೆ ನೀಡಿದರು.

ದೊಡ್ಡ ಕೆರೆ ಪರಿಶೀಲನೆ :
ಮಲೆ ಮಹದೇಶ್ವರ ಬೆಟ್ಟದಲ್ಲಿರುವ ದೊಡ್ಡಕೆರೆ ಕೊಳವನ್ನು ಸಹ ವೀಕ್ಷಣೆ ಮಾಡಿ ಕೆರೆ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಜೊತೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಇಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿ ಸಿಬ್ಬಂದಿ ವರ್ಗ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪೌರಕಾರ್ಮಿಕರ ಜೊತೆ ಮಾತುಕತೆ :
ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಜೊತೆ ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ ಮಲೆ ಮಾದೇಶ್ವರ ಬೆಟ್ಟದ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಭಕ್ತಾದಿಗಳಿಗೆ ಅನುಕೂಲ ಮಾಡಬೇಕಾಗಿ ಸೂಚನೆ ನೀಡಿದರು.

ದೊಡ್ಡ ಕೆರೆಯ ಹತ್ತಿರವಿರುವ ನಂದನ ವನವನ್ನು ಅಬಿವೃದ್ಧಿ ಪಡಿಸುವುದರ ಬಗ್ಗೆ ಸ್ಥಳವನ್ನು ಪರಿಶೀಲನೆ ನಡೆಸಿದರು ಮುಂಭಾಗದಲ್ಲಿ ತಂತಿ ಬೇಲಿ ನಿರ್ಮಿಸಲು ಸಹ ಸೂಚಿಸಿದರು.

ಇದೆ ವೇಳೆಯಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಪಿಡಬ್ಲ್ಯೂಡಿ ಸಹಾಯಕ ಇಂಜಿನಿಯರ್ ಸಂತೋಷ್,ಜೂನಿಯರ್ ಇಂಜಿನಿಯರ್ ಸೆಲ್ವಗಣಪತಿ ಗುತ್ತೇದಾರರು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ