ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಣಕು ಚುನಾವಣೆ:ಗೆದ್ದು ಬೀಗಿದ ಮಕ್ಕಳು

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ಮಕ್ಕಳ ಚುನಾವಣೆ ನಡೆಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹೇಗೆ ನಡೆಯುತ್ತವೆ ಎನ್ನುವುದನ್ನು ಶಾಲಾ ಹಂತದಲ್ಲೇ ತಿಳಿಸಲು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ಪ್ರತಿ ವರ್ಷ ಇಂತಹ ಪ್ರಯೋಗವನ್ನ ಮಾಡಲಾಗುತ್ತಿದೆ. ಈ ವರ್ಷ ಇವಿಎಂ ಬಳಸಿ ಚುನಾವಣೆ ಮಾಡಲಾಯಿತು. ಒಟ್ಟು 537 ಮತಗಳಲ್ಲಿ 515 ಮತಗಳು ಚಲಾವಣೆಯದವು. 96 ಪ್ರತಿಶತ ಮತದಾನವಾಯಿತು. ಮತದಾನದ ನಂತರ ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು. ಪ್ರಮಾಣ ವಚನ ಬೋಧಿಸಿ ಕರ್ತವ್ಯ ನಿರ್ವಹಣೆ ಹೇಗೆ ಮಾಡಬೇಕೆಂದು ಹೇಳಲಾಯಿತು.
ಸಂಸ್ಥೆಯ ಅಧ್ಯಕ್ಷ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ವೀಕ್ಷಿಸಿ ಶಿಕ್ಷಕ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. ನಂತರ ಮಾತನಾಡಿದ ಪೂಜ್ಯರು ಇಂತಹ ಚುನಾವಣೆಗಳ ಮೂಲಕ ಮಕ್ಕಳಲ್ಲಿ ಕಲಿಕೆಯ ಆಸಕ್ತಿಯನ್ನು ಬೆಳೆಸುವ ಜೊತೆಗೆ ಚುನಾವಣೆ ಅರಿವು ಬೆಳೆಸಿಕೊಳ್ಳಲು ಅಗತ್ಯ. ಮಕ್ಕಳು ಮತದಾನದ ಮಹತ್ವ ಅರ್ಥಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಮತ ಚಲಾಯಿಸಬೇಕೆಂಬ ಜ್ಞಾನ ಹೊಂದಬೇಕು ಎಂದು ಹೇಳಿದರು.
ಶಿಕ್ಷಕ ಸಿದ್ದಲಿಂಗ ಬಾಳಿ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಶಿಕ್ಷಕರಾದ ವಿದ್ಯಾಧರ ಖಂಡಳ, ಈಶ್ವರಗೌಡ ಪಾಟೀಲ್, ಶಿವಕುಮಾರ್ ಸರಡಗಿ, ಅನಿಲ್, ಬಸವರಾಜ್, ರವಿ, ಸುಗುಣಾ, ಭುವನೇಶ್ವರಿ, ರಾಧಾ, ಗೀತಾ, ಮಂಜಳಾ, ಭಾರತಿ ಸೇರಿದಂತೆ ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು.

ವರದಿ ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ