ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಜ್ಯೋತಿಭಾಪುಲೆ ಸಮಾಜಮುಖಿ ನೌಕರರ ಸಂಘ ಒಕ್ಕೂಟದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮೀಸಲಾತಿ ಜನಕ ಛತ್ರಪತಿ ಶ್ರೀ ಶಾಹುಮಹರಾಜ್ ರವರ 150 ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ 2023/24ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಚಾಮರಾಜನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮಣಗಳ್ಳಿ ಗ್ರಾಮದ ಚಿಕ್ಕಬಸವಯ್ಯ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚಿಕ್ಕಬಸಯ್ಯ ಅವರು ನಾನು ಬಡತನದಿಂದ ಓದಿ ಮುಂದೆ ಬಂದು ಸರ್ಕಾರಿ ಕೆಲಸ ಪಡೆದು 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ.

ಸೇವಾವಧಿಯಲ್ಲಿ ನಮ್ಮ ಮಣಗಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ನನ್ನ ಕೈಲಾದ ಕೆಲಸ ಕಾರ್ಯಗಳು ಮಾಡಿದ್ದೇನೆ. ಎಸ್.ಟಿ/ಎಸ್.ಟಿ ಬಡ ಮಕ್ಕಳ ಸೇವೆ ಮಾಡಿರುವುದು ನನ್ನ ಸೌಭಾಗ್ಯ. ನಮ್ಮ ಇಲಾಖೆಗೆ ಬರುವ ಇಲಾಖೆಯಿಂದ ಸಿಗಬೇಕಾದಂತಹ ಸೌಲಭ್ಯಗಳನ್ನು ತಲುಪಿಸವ ಕೆಲಸ ಮಾಡಿದ್ದೇನೆ. ಜೊತೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದೆನೆ ಕಾರ್ಯಕ್ರಮವನ್ನು ಯಶಸ್ವಿಯಾದೆ ಎಂದು ತಮ್ಮ ವೃತ್ತಿಯ ಅನುಭವಗಳನ್ನು ಹಂಚಿಕೊಂಡರು.

ಚಿತ್ರದುರ್ಗ ಅಬಕಾರಿ ಇಲಾಖೆ ಉಪ ಆಯುಕ್ತರು ಡಾ.ಮಾದೇಶ್.ಬಿ ಅವರು ಮಾತನಾಡಿ ವಿದ್ಯಾರ್ಥಿಗಳು ಮುಖ್ಯವಾಗಿ ಗುರುಗಳ ಮಾರ್ಗದರ್ಶನದಲ್ಲಿ ಸಾಗಿದರೆ ಮಾತ್ರ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ. ಸಾಮಾಜಿಕ ಧ್ಯಾನವನ್ನು ಬೆಳೆಸಿಕೊಳ್ಳುವ ಮೂಲಕ ನಿವು ಇತರರಿಗೆ ಮಾದರಿಯಾಗಿ ಸಾಮಾಜಿಕವಾಗಿ ಸೇವೆ ಮಾಡುವಂತಾಗಬೇಕು. ವಿದ್ಯಾರ್ಥಿಗಳು ಶಿಕ್ಷಕರಿಂದ ಪ್ರೇರಿತರಾಗಲು ಹಾಗೂ ಸಾಧನೆಗೆ ಶ್ರಮವಹಿಸಲು ಶಾಲೆಯ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರ ಸಮಾಜದಲ್ಲಿ ಅಧಿಕಾರಿಗಳ ಜವಾಬ್ದಾರಿಯನ್ನು ತಿಳಿಸಿದರು. ಮಹಾತ್ಮ ಬಾಪುಲೆ ಡಾಕ್ಟರ್ ಬಿಆರ್ ಅಂಬೇಡ್ಕರ್ ಕನಕದಾಸರು. ಪೆರಿಯಾರ್. ಮತ್ತು ಅಬ್ದುಲ್ ಕಲಾಂ. ಅಂತ ಮಹಾ ಪುರುಷರ ಬುದ್ಧ ಬಸವ ಅವರ ತತ್ವಗಳನ್ನು ಚಾಚು ತಪ್ಪದೆ ಪಾಲಿಸಬೇಕು ಸಮಾಜದಲ್ಲಿ ಉತ್ತಮ ಶಿಕ್ಷಣವನ್ನು ಪಡೆದುಕೊಂಡು ಮುಂದೆ ಬರಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು. ಮತ್ತು ಅವರು ಒಂದನೇ ತರಗತಿಯಿಂದ ಐಎಸ್ ಅಧಿಕಾರಿಗಳ ಆಗುವ ತನಕ ತಮ್ಮ ಜೀವನದ ಕಷ್ಟ ಸುಖ ದುಃಖ ಹೇಳು ಬೇಳುಗಳನ್ನು ಹಂಚಿಕೊಂಡರು

ಬೆಂಗಳೂರು ಜಿಎಸ್‌ಟಿ ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರು ಮಣಗಳ್ಳಿ ಶಿವಣ್ಣ.ಎಂ ಅವರು ಮಾತನಾಡಿ ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ಅರಿತುಕೊಳ್ಳಬೇಕು. ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಜ್ಯೋತಿಬಾಪುಲೆ ನಾಲ್ವಡಿ ಕೃಷ್ಣರಾಜ ಒಡೆಯರ್ ಶಹೂ ಮಹಾರಾಜ್ ಹಾಗೂ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರು ಚಿಂತನೆ ಹಾಗೂ ಮಾರ್ಗದರ್ಶನ ಪ್ರಮುಖ ಮಾರ್ಗದರ್ಶನವಾಗಿದೆ.

ಪ್ರತಿಭಾವಂತ ವಿದ್ಯಾರ್ಥಿಗಳು ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಸಾಧನೆ ಮುಂದಿನ ದಿನಗಳಲ್ಲಿ ಉನ್ನತ ಮಟ್ಟದಲ್ಲಿ ಅತ್ಯುತ್ತಮ ಶ್ರೇಣಿ ವೇದಿಕೆಗೆ ಪೂರಕವಾಗಬೇಕು ವಿದ್ಯಾರ್ಥಿಗಳಿಗೆ ಕರೆಕೊಟ್ಟರು. ಇದೇ ಗ್ರಾಮದಲ್ಲಿ ಹುಟ್ಟಿ ಬಡತನದಿಂದ ಬೆಳೆದು ಉನ್ನತಿ ಪಡೆದಿರುವುದು ಮಕ್ಕಳಿಗೆ ಸ್ಪೂರ್ತಿ ಎಂದು ತಿಳಿಸಿದರು. ಹಾಗೂ ಪೋಷಕರ ಪಾತ್ರದ ಬಗ್ಗೆ ತಂದೆ ತಾಯಿ ಹಾಗೂ ಕುಟುಂಬ ವರ್ಗದವರ ನೆನಪಿಸಿಕೊಂಡರು ಮತ್ತು ಪೋಷಕರಿಗೆ ಮಕ್ಕಳ ಓದಿನ ಅರಿವು ಏನೆಂಬುದರ ಬಗ್ಗೆ ತಿಳಿಸಿದರು.

ಕೊಳ್ಳೇಗಾಲ ಕ್ಷೇತ್ರ ಸಮನ್ವಯ ಅಧಿಕಾರಿ ಮಣಗಳ್ಳಿ ಮಹದೇವ್ ಕುಮಾರ್ ಅವರು ಮಾತನಾಡಿ ಭಾರತದ ಚಿಂತಕರು ಇತಿಹಾಸವನ್ನು ಮಹಾತ್ಮ ಜ್ಯೋತಿಬಾಪುಲೆ, ಛತ್ರಪತಿ ಸಾಹು ಮಹಾರಾಜ್ ನಾಲ್ಕನೇ ಕೃಷ್ಣರಾಜ ಒಡೆಯರ್ ಅವರ ಸಾಧನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಜಾರಿಗೊಳಿಸಿರುವ ಬಗ್ಗೆ ಮಕ್ಕಳಿಗೆ ಬೋಧಿಸಿದರು ಹಾಗೂ ಬುದ್ಧ ಚಿಂತನೆಯನ್ನು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ ಕಡೆಗೆ ಹೆಚ್ಚಿನ ಮಹತ್ವವನ್ನು ನೀಡಿ ಶಾಲೆಗೆ ಕೀರ್ತಿ ತರುವಂತಾಗಬೇಕು ಗುರುಗಳ ಮಾರ್ಗದರ್ಶನವನ್ನು ಪಡೆದುಕೊಳ್ಳಿ. ಮಕ್ಕಳು ದುಶ್ಚಟ. ಹಾಗೂ ಮೊಬೈಲ್ ಬಳಕೆವನ್ನ ಹೆಚ್ಚಾಗಿ ಉಪಯೋಗಿಸಬಾರದು ಶಾಲೆಗೆ ಹಾಗೂ ದೇಶಕ್ಕೆ ಕೀರ್ತಿ ತರುವಂತಹರಾಗಬೇಕು ಎಂದರು

ಈ ಸಂದರ್ಭದಲ್ಲಿ ಮಣಗಳ್ಳಿ ಶಾಲೆ ಮುಖ್ಯ ಶಿಕ್ಷಕ ನಾಗರಾಜು, ಕೊಳ್ಳೇಗಾಲ ಕ್ಷೇತ್ರ ಸಮನ್ವಯಾಧಿಕಾರಿ ಡಿ.ಮಹದೇವ್ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಮಲ್ಲಿಕಾರ್ಜುನ ಸ್ವಾಮಿ, ಎನ್‌ಜಿಓ ನೌಕರ ಪ್ರಕಾಶ್, ಪೋಲಿಸ್ ಇಲಾಖೆ ಮಹೇಶ್ ಕುಮಾರ್, ಶಿಕ್ಷಕರಾದ ನಂಜುಂಡ, ಕೃಷ್ಣಮೂರ್ತಿ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಇನ್ನಿತರರು ಹಾಜರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ