ಕೊಪ್ಪಳ:ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಕುಷ್ಟಗಿ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 25ರಂದು ಕುಷ್ಟಗಿಯಲ್ಲಿ ಬೆಳಿಗ್ಗೆ 11ಗಂಟೆಗೆ ಕುಷ್ಟಗಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕುಷ್ಟಗಿ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ. ಈ ಕುರಿತು ದೂರು ಸ್ವೀಕರಿಸಲು ಲೋಕಾಯುಕ್ತರಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳ ಸಭೆ ನೆಡೆಸಲು ತೀರ್ಮಾನ ಮಾಡಲಾಗಿದೆ.
ಈ ಸಭೆಯಲ್ಲಿ ಲೋಕಾಯುಕ್ತರು ಅಧಿಕಾರಿಗಳು ಎಲ್ಲಾ ಇಲಾಖೆಯ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಜ.17ರ ಸಭೆಯ ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9364062699, 9364062700, 9364062701,9364062702 ಹಾಗೂ 9364062703 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.