ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಇಂದು ಸರಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಜೀವಜಲ ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸಿ ಎಂದು ಜನಜಾಗೃತಿ ಮೂಡಿಸುವ ಸಲುವಾಗಿ ಊರಿನ ಪ್ರಮುಖ ಬೀದಿ ಬೀದಿಗಳಲ್ಲಿ ವಿದ್ಯಾರ್ಥಿನಿಯರು ಘೋಷ ವಾಕ್ಯಗಳೊಂದಿಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ಹನಿ ಹನಿ ನೀರನ್ನು ಪೋಲು ಮಾಡದೆ ಸಂರಕ್ಷಿಸುವುದು, ಮಿತವಾಗಿ ಬಳಸುವುದು, ಪ್ರತಿಜೀವಿಗೂ ಬದುಕಲು ನೀರು ಬೇಕು ಹೀಗಾಗಿ ಜಲ ಮೂಲಗಳನ್ನು ಸಂರಕ್ಷಣೆ ಮಾಡುವುದು ಹಾಗೂ ನೀರು ಪೋಲಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಘೋಷ ವಾಕ್ಯಗಳೊಂದಿಗೆ ಸಂಚರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ವರದಿ ಮನೋಜ್ ನಿಂಬಾಳ