ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಉಪ ವಿಭಾಗಾಧಿಕಾರಿ ಅಭಿಷೇಕ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತುಂಗಭದ್ರಾ ನದಿಯ ಪಕ್ಕದಲ್ಲಿರುವ ಹದಿಮೂರು ಮನೆಯ ಜನರನ್ನು ಸ್ಥಳಾಂತರ ಮಾಡಲಾಗಿದೆ ಹೊನ್ನಾಳಿ ಪಟ್ಟಣದ ತಗ್ಗು ಪ್ರದೇಶ ಬಾಲರಾಜ್ ಘಾಟ್ ಬಳಿ ಎ.ಸಿ.ಅಭಿಷೇಕ್ ಮತ್ತು ತಾಲ್ಲೂಕು ಆಡಳಿತ ಪರಿಶೀಲನೆ ನಡೆಸಿ ಗಂಜಿ ಕೇಂದ್ರ ತೆಗೆಯಲಾಗಿದೆ ಇಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಈ ಸಮಸ್ಯೆ ಇದ್ದರೂ ಇಲ್ಲಿ ಯಾವುದೇ ರೀತಿಯ ತಡೆ ಗೋಡೆ ನಿರ್ಮಾಣ ಮಾಡದೆ ಇರುವುದು ಈ ಸಮಸ್ಯೆಗೆ ಕಾರಣ ಇಲ್ಲಿ ವಾಸವಾಗಿದ್ದಾರೆ ಹಲವಾರು ಕುಟುಂಬಗಳು ಸ್ಥಳಾಂತರ ಮಾಡಲಾಗಿದೆ ಅಂದ್ರು ಇನ್ನೂ ಕೆಲವು ಕುಟುಂಬಗಳು ಇವೆ ಇವುಗಳನ್ನು ಸ್ಥಳಾಂತರ ಮಾಡಬೇಕು ಇಲ್ಲವಾದರೆ
ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಾಲೂಕು ಆಡಳಿತ ಮುಂದಾಗಬೇಕು ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ತುಂಗಾ ಜಲಾಯಶದಿಂದ ಹೆಚ್ಚುವರಿ ನೀರು ನದಿಗೆ ಹರಿಸಿರುವ ಕಾರಣ ಹೊನ್ನಾಳಿಯಲ್ಲಿ ಮಂಗಳವಾರ ರಾತ್ರಿ ನದಿ ನೀರಿನ ಮಟ್ಟ 9.800 ಮೀ.ಗೆ ಏರಿಕೆಯಾಗಿದೆ ಪರಿಣಾಮ ಹೊನ್ನಾಳಿ ಪಟ್ಟಣದ ಜನವಸತಿ ತಗ್ಗು ಪ್ರದೇಶವಾದ ಬಾಲರಾಜ್ ಘಾಟ್ ಸಮೀಪಕ್ಕೆ ನೀರು ಬಂದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ಉಪ ವಿಭಾಗಾಧಿಕಾರಿ ಅಭಿಷೇಕ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಯಾವುದೇ ಸಂದರ್ಭದಲ್ಲಿನದಿ ನೀರಿನಮಟ್ಟ ಇನ್ನೂ ಹೆಚ್ಚಿಯಾಗಬಹುದು. ತೀರಾ ತಗ್ಗು ಪ್ರದೇಶದ ಈ 13 ಮನೆಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಉಪವಿಭಾಗಾಧಿಕಾರಿ ಅಭಿಷೇಕ್ ಈ ಸಂದರ್ಭ ಮಾತನಾಡಿ, ಚಿಕ್ಕಮಗಳೂರು ಶೃಂಗೇರಿ, ಕೊಪ್ಪ, ಮತ್ತಿತರ ಕಡೆಗಳಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಭದ್ರಾ ಜಲಾಶಯಕ್ಕೂ ಹೆಚ್ಚಿನ ಒಳಹರಿವು ಉಂಟಾಗಿದೆ. ಒಂದೇ ದಿನದಲ್ಲಿ ಸುಮಾರು 3.50 ಅಡಿಯಷ್ಟು
ಹೆಚ್ಚು ನೀರು ಜಲಾಶಯಕ್ಕೆ ಬಂದಿದೆ. ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಕೂಡ ಉತ್ತಮ ಮಳೆ, ಆಗುತ್ತಿರುವ ಹಿನ್ನೆಲೆಯಲ್ಲಿ ಕಾರಣ ತುಂಗಾನದಿಗೆ ಸುಮಾರು 61.70 ಕ್ಯುಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಈ ಕಾರಣಗಳಿಂದ ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆತೆರಳುವಂತೆ ಮತ್ತು ಜನ-ಜಾನುವಾರುಗಳು ನದಿ ಸಮೀಪ ಹೋಗದಂತೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಎಸಿ ಮಾಹಿತಿ ನೀಡಿದರು.ಸತತ ಮಳೆಯಿಂದಾಗಿ ಚನ್ನಗಿರಿ ತಾಲೂಕಿನಲ್ಲಿ 6 ಮನೆಗಳ ಹಾನಿ ಹಾಗೂ ಹೊನ್ನಾಳಿಯಲ್ಲಿ 1 ಮನೆಯ ಮಹಡಿ ಗೋಡಿ ಬಿದ್ದು ಹಾನಿಯಾಗಿದೆ ಎಂದೂ ತಿಳಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾ‌ರ್ ಪಟ್ಟರಾಜಗೌಡ, ಪುರಸಭೆ ಮುಖ್ಯಾಧಿಕಾರಿ ಟಿ.ಲೀಲಾವತಿ, ಬೆಸ್ಕಾಂಎ.ಇ.ಇ.ಜಯಪ್ಪ, ಸ್ಥಳದಲ್ಲಿ ಕಂದಾಯ, ಪುರಸಭೆ, ಬೆಸ್ಕಾಂ ಇಲಾಖೆಗಳ ನೌಕರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ