ಬಾಗಲಕೋಟೆ:ಬೇವೂರಿನ ಪಿ ಎಸ್ ಸಜ್ಜನ ಕಲಾ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಸಮೀಪದ ಚಿಟಗಿನಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು ದಿನಾಂಕ 22-7-24 ರ ಸೋಮವಾರದಂದು ಉದ್ಘಾಟನಾ ಸಮಾರಂಭ ಜರುಗಲಿದೆ. ಈ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ವಶಿಷ್ಠ ಮಹಾಮುನಿಗಳು ಶ್ರದ್ಧಾನಂದ ಮಠ ಸುಕ್ಷೇತ್ರ ಸೀತಿಮನಿ ಇವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದರ್ಶ ವಿದ್ಯಾವರ್ಧಕ ಸಂಘದ ಸದಸ್ಯರಾದ ಶ್ರೀ ಡಿ.ಜಿ ಶಿರೂರ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಾಗಲಕೋಟೆಯ ಎಸ್.ಆರ್. ನರಸಾಪೂರ ಕಲಾ ಹಾಗೂ ಎಂ.ಬಿ ಶಿರೂರು ವಾಣಿಜ್ಯ ಮಹಾವಿದ್ಯಾಲಯದ ಡಾ.ಎಸ್.ಎಸ್. ಹಂಗರಗಿ ಸಹ ಪ್ರಾಧ್ಯಾಪಕರು ಭಾಗಿಯಾಗಲಿದ್ದಾರೆ. ಎಸ್. ಡಿ ಎಂ.ಸಿ ಅಧ್ಯಕ್ಷರಾದ ವಾಯ್. ಎಚ್. ಬೆನಕನವಾರಿ ಗ್ರಾಮ ಪಂಚಾಯತಿ ಸದಸ್ಯರಾದ ಎನ್. ಬಿ ಪಾಟೀಲ್ ಶ್ರೀಮತಿ ಜಿ.ವಾಯ್ ಮಾದರ್, ಶಿಕ್ಷಣ ಪ್ರೇಮಿಗಳಾದ ಶ್ರೀಕರ ದೇಸಾಯಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ಎಸ್.ಎಂ. ಚಲವಾದಿ ಸೇರಿದಂತೆ ಎಸ್.ಡಿ.ಎಂ.ಸಿ.ಯ ಎಲ್ಲಾ ಸದಸ್ಯರು ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಚಿಟಿಗಿನಕೊಪ್ಪದ ಪ್ರಭಾರಿ ಮುಖ್ಯ ಗುರುಗಳಾದ ಸುನಿಲ್. ಆರ್. ಪಾಟೀಲ್ ಇವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದು ಪ್ರಾಚಾರ್ಯರಾದ ಡಾ. ಜ.ಗು ಬೈರಮಟ್ಟಿ ಹಾಗೂ ಯೋಜನಾಧಿಕಾರಿಗಳಾದ ಜಿ.ಎಸ್ ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಂದು ವಾರದ ವಿಶೇಷ ಶಿಬಿರದಲ್ಲಿ ಶ್ರಮದಾನದ ಕಾರ್ಯಗಳು ,ಸಾಂಸ್ಕೃತಿಕ ಕಾರ್ಯಕ್ರಮಗಳು, ಉಚಿತ ಆಯುಷ್ಯ ಆರೋಗ್ಯ ಚಿಕಿತ್ಸ ಶಿಬಿರ ಜರುಗಲಿವೆ ಶಿಬಿರದಲ್ಲಿ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ 50 ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.