ಕಾರವಾರ :ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಪ್ರವಾಹ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಶಾಸಕರು ಪಾಲ್ಗೊಂಡು,ಸಂಕಷ್ಟದಲ್ಲಿರುವ ಜನರಿಗೆ ತುರ್ತು ನೆರವು ಒದಗಿಸುವ ಸಂಬಂಧ ಹಾಗೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಪರಿಹಾರ ಒಗದಿಸಲು ತಕ್ಷಣ ಹಾನಿಯ ವರದಿ ಸಿದ್ದಪಡಿಸಿ,ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಯಿತು.
ಸಭೆಯಲ್ಲಿ ಕಂದಾಯ ಸಚಿವ ಶ್ರೀ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ,ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಂಕಾಳ ವೈದ್ಯ,ಶಾಸಕರು,ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರು,ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ,ಜಿ.ಪಂ ಸಿಇಒ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.