ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಹಸೀಲ್ದಾರರ ಕಛೇರಿಗೆ ಕರೆ ಮಾಡಲು ಸಹಾಯವಾಣಿ ಆರಂಭ

ಯಾದಗಿರಿ:ಕೃಷ್ಣಾ ನದಿಗೆ ಆಲಮಟ್ಟಿಗೆ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ ಸುಮಾರು 3 ಲಕ್ಷ ಕ್ಯೂಸೆಕ್ಸ್ ನೀರು ಹರಿಬಿಡುತ್ತಿರುವುದರಿಂದ ಯಾದಗಿರಿ ಜಿಲ್ಲೆಯ ನದಿಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆಗಳಿರುವುದರಿಂದ ಸದರಿ ನದಿ ಪಾತ್ರದ ಗ್ರಾಮಗಳ ಜನರು ನದಿಗೆ ಇಳಿಯದಂತೆ ಹಾಗೂ ತಮ್ಮ ಜಾನುವಾರಗಳೊಂದಿಗೆ ಸುರಕ್ಷಿತೆ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಪ್ರವಾಹದ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.
ಈ ಕುರಿತು ಏನಾದರೂ ಸಮಸ್ಯೆ ಹಾಗೂ ದೂರುಗಳಿದ್ದಲ್ಲಿ ಗ್ರಾಮಸ್ಥರು ಜಿಲ್ಲಾಡಳಿತ ಯಾದಗಿರಿ ಮತ್ತು ತಾಲೂಕು ಆಡಳಿತ ವತಿಯಿಂದ ಸಾರ್ವಜನಿಕರಿಗೆ ಸ್ಪಂದಿಸಲು 24*7 ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ಸಾರ್ವಜನಿಕರು ಈ ಕೆಳಕಂಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಹಸೀಲ್ದಾರರ ಕಛೇರಿಗೆ ಕರೆ ಮಾಡಲು ಸಹಾಯವಾಣಿ ಆರಂಭಿಸಲಾಗಿದೆ.
ಯಾದಗಿರಿ ಜಿಲ್ಲಾಧಿಕಾರಿಗಳ ಕಛೇರಿ ಸಹಾಯವಾಣಿ ಕೇಂದ್ರ 08473 253950 ಇದ್ದು, ತಾಲೂಕು ಮಟ್ಟದ ಸಹಾಯವಾಣಿ ಕೇಂದ್ರ ಯಾದಗಿರಿ ತಹಶೀಲ್ದಾರರ ಕಛೇರಿ 9901112994, 08473 253611, ಶಹಾಪೂರ ತಹಸೀಲ್ದಾರರ ಕಛೇರಿ 9448333545, 08479 243321, ಸುರಪುರ ತಹಸೀಲ್ದಾರರ ಕಛೇರಿ 9980265830, 08443 256043, ವಡಗೇರಾ ತಹಸೀಲ್ದಾರರ ಕಛೇರಿ 9449733123, 6360077481, ಹುಣಸಗಿ ತಹಸೀಲ್ದಾರರ ಕಛೇರಿ 9945103885, 9019132429 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ