ಯಾದಗಿರಿ :ದೇಶದಲ್ಲಿ ಒಂದು ಗಂಟೆಗೆ ಶೇಕಡ 20ರಷ್ಟು ಅಪಘಾತದಲ್ಲಿ ಹೆಚ್ಚಿನ ಸಂಖ್ಯೆ ಯುವಕರೇ ಸಾವು ನೋವುಗೆ ಬಲಿಯಾಗುತ್ತಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದ ಕುಮಾರ್ ಅವರು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಜಿಲ್ಲಾ ಮೋಟಾರ್ ವಾಹನ ತರಬೇತಿ ಶಾಲೆಯ ಮಾಲೀಕರ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೀಟ್ ಬೆಲ್ಟ್, ಹೆಲ್ಮೆಟ್ ಧರಿಸಿ ಜೀವ ಉಳಿಸಿ ಜಾಗೃತಿ ಹಾಗೂ ಸಾರಿಗೆ ವಾಹನಗಳ ತ್ರೈಮಾಸಿಕ ತೆರಿಗೆ ಬರಿಸುವ ಬಗ್ಗೆ ಜಾತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ವಾಹನ ಚಾಲಕರು ತಮ್ಮ ವಾಹನಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಪಾಲಿಸುತ್ತಾ ಅದೇ ರೀತಿ ಸಂಚಾರ ನಿಯಮಗಳನ್ನು ಪಾಲನೆ ಮಾಡುತ್ತಾ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕೆಂದು ಹೇಳಿದರು.
ಕಡ್ಡಾಯವಾಗಿ ದ್ವಿಚಕ್ರ ವಾಹನ ಚಾಲಕರು ಹೆಲ್ಮೆಟ್ ಧರಿಸಬೇಕು ಹಾಗೂ ತಮ್ಮ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಚಾಲ್ತಿಯಲ್ಲಿ ಇಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೋಟಾರ್ ವಾಹನ ನಿರೀಕ್ಷಕರಾದ ಅಯ್ಯಾಳಪ್ಪ, ಕಚೇರಿಯ ಸಿಬ್ಬಂದಿ ಶಿವಕುಮಾರ ನವಲೆ, ರಾಮಕೃಷ್ಣ ಮತ್ತು ಪ್ರಶಾಂತ, ನಗರ ಪೊಲೀಸ್ ಠಾಣೆ ಉಪನಿರೀಕ್ಷಕರಾದ ಶಾಮ್ ಸುಂದರ, ಮೋಟಾರ್ ವಾಹನ ತರಬೇತಿ ಶಾಲೆಯ ಜಿಲ್ಲಾಧ್ಯಕ್ಷ ಯಲ್ಲಪ್ಪ ದೊಡ್ಡಮನಿ, ಉಪಾಧ್ಯಕ್ಷ ಜುಬೇರ್ ಅಹಮದ್, ಕಾರ್ಯದರ್ಶಿ ಬಸಯ್ಯಸ್ವಾಮಿ, ಮೋಟಾರ್ ತರಬೇತಿ ಶಾಲೆಯ ಮಾಲೀಕರಾದ ಅಬ್ದುಲ್ ಅಜೀಜ್, ಅಬ್ದುಲ್ ಖದೀರ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಶಿವರಾಜ ಸಾಹುಕಾರ್ ವಡಗೇರಾ