ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನ ಕಟ್ಟೆ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡಿ ಎಂದು ಶಾಸಕ ಎಂ.ಆರ್ ಮಂಜುನಾಥ್ ರವರಿಗೆ ಮನವಿ ಮಾಡಿದರು.
ಹನೂರು ವಿಧಾನ ಸಭಾ ಕ್ಷೇತ್ರದ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗನಕಟ್ಟೆ ದೊಡ್ಡಿ ಗ್ರಾಮದವರು ಇಂದು ಶಾಸಕ ಎಂ.ಆರ್. ಮಂಜುನಾಥ್ ರವರನ್ನು ಕೊಳ್ಳೇಗಾಲ ತಾಲ್ಲೂಕು ಪಂಚಾತಿಯ ಶಾಸಕರ ಕಚೇರಿಯಲ್ಲಿ ಭೇಟಿ ನೀಡಿ ಮನವಿಯನ್ನು ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಶಾಸಕರು ಖುದ್ದಾಗಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ನಿಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ವರದಿ ಉಸ್ಮಾನ್ ಖಾನ್