ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವ ಭಾವಿ ಸಭೆ

ಚಾಮರಾಜನಗರ:ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪದೋಷಗಳಿಲ್ಲದೆ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಹಬ್ಬಗಳ ಆಚರಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹನೂರು ವಿಧಾನಸಭಾ ಕ್ಷೇತ್ರ ಗುಡ್ಡಗಾಡು ಪ್ರದೇಶ ದಟ್ಟಹರಣ್ಯಗಳಿಂದ ಕೂಡಿರುವ ಶೇಕಡ 70 ಅರಣ್ಯ ಪ್ರದೇಶವೇ ಇರುವುದರಿಂದ ಅರಣ್ಯ ಇಲಾಖೆ ಮುಖ್ಯವಾಗಿ ಮೂರು ವಿಭಾಗಗಳ ಹಿರಿಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ ದಿನಾಚರಣೆ ಯಶಸ್ವಿಗೊಳಿಸಬೇಕು ಜೊತೆಗೆ ಆಯಾ ಇಲಾಖೆ ತಮಗೆ ವಹಿಸಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಬಾರದಂತೆ ಕ್ರಮ ಕೈಗೊಳ್ಳುವ ಮೂಲಕ ಅಧಿಕಾರಿ ಸಿಬ್ಬಂದಿ ವರ್ಗದವರು ಕ್ರಮ ಕೈಗೊಳ್ಳಬೇಕು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ವಿದ್ಯುತ್ ಇಲಾಖೆ ಕಾರ್ಯಕ್ರಮದ ದಿನ ವಿದ್ಯುತ್ ದೀಪ ಅಲಂಕಾರ ಮಾಡುವ ಮೂಲಕ ಕ್ರಮ ಕೈಗೊಳ್ಳಬೇಕು ಶಾಲಾ ಮಕ್ಕಳಿಂದ  ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಬರುವಂತ ಮಕ್ಕಳಿಗೆ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವುದರಿಂದ ಯಾವುದೇ ಸಮಸ್ಯೆಗಳು ಆಗದಂತೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಇರುವುದು ಸಾಲದು ಹೀಗಾಗಿ ತಾತ್ಕಾಲಿಕ ಶೌಚಾಲಯ ವ್ಯವಸ್ಥೆಯನ್ನು ಸಹ ಮಾಡಬೇಕಾಗಿದೆ ಒಟ್ಟಾರೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಪ್ರತಿಯೊಬ್ಬ ಇಲಾಖೆ ಅಧಿಕಾರಿ ಸಿಬ್ಬಂದಿ ವರ್ಗದವರು ಶಿಸ್ತಿನಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗುರುಪ್ರಸಾದ್,ತಾಲೂಕ್ ಪಂಚಾಯಿತಿ ಕಾರ್ಯಾ ನಿರ್ವಹಣಾಧಿಕಾರಿ ಉಮೇಶ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಂಜಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಇನ್ಸ್ಪೆಕ್ಟರ್ ಶಶಿಕುಮಾರ್,ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಕೃಷಿ ಇಲಾಖೆ ಅಧಿಕಾರಿ ನಾಗೇಂದ್ರ, ಶೇಷಣ್ಣ,ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ