ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌.!

ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದರೊಂದಿಗೆ ಕಳೆದ ಎರಡು ತಿಂಗಳಿನಿಂದ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ನೆಮ್ಮದಿ ಸಿಕ್ಕಿದೆ. ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ.

ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್‌ ಕಾರ್ಡ್‌ ಕಡ್ಡಾಯವಾಗಿದ್ದು, ಬಿಪಿಎಲ್‌ ಕಾರ್ಡ್‌ ರದ್ದಾದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ.

ವರದಿ ಕರಿಯಪ್ಪ ಮಾ ಮಾದರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ