ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಣ ಕ್ಷೇತ್ರ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ ಪಟ್ಟಣದಲ್ಲಿ ಶಾಸಕ ಎಚ್ ವಿ ವೆಂಕಟೇಶ್

ಪಾವಗಡ:ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಅತಿ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ ಎಂದು ಪಾವಗಡದ ಶಾಸಕ ಎಚ್‌ ವಿ ವೆಂಕಟೇಶ್ ತಿಳಿಸಿದ್ದಾರೆ, ಬುಧವಾರ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಈ ವೈ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ “ಸೌರಭ -2024 ಕಾಲೇಜು ವಾರ್ಷಿಕೋತ್ಸವ” ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ನಾವು ಶಿಕ್ಷಣವನ್ನು ಪಡೆಯುತ್ತಿದ್ದಂತಹ ಸಂದರ್ಭದಲ್ಲಿ ನೆಲದ ಮೇಲೆ ಕುಳಿತು ಪಾಠವನ್ನು ಕೇಳುವಂತಿತ್ತು ಆದರೆ ಈಗ ಅತ್ಯಾಧುನಿಕ ಪರಿಕರಗಳಿಂದ ಪಾಠ ಕೇಳುವಂತಹ ಭಾಗ್ಯವನ್ನು ತಾವೆಲ್ಲರೂ ಪಡೆದುಕೊಂಡಿದ್ದೀರಾ ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉನ್ನತವಾದಂತ ಶಿಕ್ಷಣವನ್ನು ಪಡೆದುಕೊಂಡು ಜೀವನದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಬೇಕು ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿ ಮತ್ತು ಆಡಿಟೋರಿಯಂ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಗುದ್ದಲಿ ಪೂಜೆಯನ್ನು ನೆರವೇರಿಸುತ್ತೇವೆ, ಇತ್ತೀಚಿನ ದಿನಗಳಲ್ಲಿ ಕಾಲೇಜು ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ, ವಿ ಎನ್ ಮುರಳಿಧರ್ ಮಾತನಾಡಿದ 2024ನೇ ಶೈಕ್ಷಣಿಕ ಸಾಲಿನ ವಿವಿಧ ಕಾಲೇಜು ಕಾರ್ಯಕ್ರಮಗಳ ಸಮಾರೋಪವನ್ನು ನೆರವೇರಿಸಿದ್ದು ಈಗಾಗಲೇ ಕಾಲೇಜಿಗೆ ಬೇಕಾದ ಅಭಿವೃದ್ಧಿಗೆ ಶಾಸಕರು ಉತ್ತಮವಾಗಿ ಸ್ಪಂದಿಸುತ್ತಿದ್ದು, ಈ ಬಾರಿ ಅಂತಿಮ ವರ್ಷದ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುವಂತಹ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಜಾನಪದ ವಿದ್ವಾಂಸರು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಎಣ್ಣೆಕಟ್ಟೆ ಚಿಕ್ಕಣ್ಣ ಮಾತನಾಡಿ ಪಾವಗಡ ನೆಲದಲ್ಲಿ ಹಳೆಯ ಸಂಸ್ಕೃತಿ ಇದ್ದು ಈ ಭಾಗದಲ್ಲಿ ಅನೇಕ ಮಹನೀಯರು ಜನ್ಮ ತಾಳಿದ್ದಾರೆ, ಶೂಲದ ಈರಣ್ಣ ಎನ್ನುವ ವ್ಯಕ್ತಿಯ ಕಥೆಯನ್ನ ವಿದ್ಯಾರ್ಥಿಗಳಿಗೆ ತಿಳಿಸುತ್ತಾ ಗುರು ಹಿರಿಯರನ್ನು ಗೌರವಿಸುವಂತೆ ಮತ್ತು ನಂಬಿಕೆಗೆ ಪುಣ್ಯಕೋಟಿ ಗೋವಿನ ಕಥೆಯನ್ನು ಮಾದರಿಯಾಗಿ ತೆಗೆದುಕೊಳ್ಳುವಂತೆ ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಪುರುಷರು ಗುಡ್ಡಗಾಡು ಓಟದಲ್ಲಿ ಈ ಕಾಲೇಜು ಪ್ರಥಮ ಸ್ಥಾನ ಮತ್ತು ಖೋ ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ, ಹಾಗೂ ಕಾಲೇಜಿನ ವಿದ್ಯಾರ್ಥಿಗಳಾದ ಭರತ್ ಎನ್, ಸತೀಶ್ ಕುಮಾರ್ ನಾಯ್ಕ್, ಪ್ರತಾಪ್ ರೆಡ್ದಿ, ಇವರು ತುಮಕೂರು ವಿಶ್ವವಿದ್ಯಾನಿಲಯದ ಪುರುಷರ ಗುಡ್ಡಗಾಡು ಓಟ, ಬಾಲ್ ಬ್ಯಾಡ್ಮಿಂಟನ್, ಮತ್ತು ಖೋ ಖೋ ಪಂದ್ಯಾವಳಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯದ ಕ್ರೀಡೆಗಳಲ್ಲಿ ಭಾಗವಹಿಸಿದ್ದು ಇವರಿಗೆ ಶಾಸಕರು ಸನ್ಮಾನ ಮಾಡಿ ಪ್ರೋತ್ಸಾಹಧನ ನೀಡಿ ಕಾಲೇಜಿನ ಕ್ರೀಡಾ ವಿಭಾಗದಿಂದ ಗೌರವ ಸಮರ್ಪಣೆ ಮಾಡಲಾಯಿತು.
ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಪ್ರಹಲ್ಲಾದ್ ಬಿಪಿ, ಪುರಸಭಾ ಸದಸ್ಯರಾದ ಸುದೇಶ್ ಬಾಬು, ಮಾಜಿ ಪುರಸಭಾ ಅಧ್ಯಕ್ಷರಾದ ಎ ಶಂಕರ್ ರೆಡ್ಡಿ, ಕಾಂಗ್ರೆಸ್ ಮುಖಂಡ ಬತ್ತಿನೇನಿ ನಾನಿ, ನಿವೃತ್ತ ಮುಖ್ಯ ಶಿಕ್ಷಕರಾದ ಮೈಲಪ್ಪ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಸ್ಟುಡಿಯೋ ಅಮರ್ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ:ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!