ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಿಎಂ ಭೇಟಿಗೆ ಅವಕಾಶ ಕೊಡದಿದ್ರೆ ಕಪ್ಪು ಬಾವುಟ ಪ್ರದರ್ಶನ : ರಾಮಾಪುರ ರಾಜೇಂದ್ರ

ಹನೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜನಗರ ಜಿಲ್ಲೆಯ ಭೇಟಿ ಸಂದರ್ಭದಲ್ಲಿ ರೈತರ ಸಮಸ್ಯೆ ಕುರಿತು ಅವರಿಗೆ ಮನವಿ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಇಲ್ಲದಿದ್ದಲ್ಲಿ, ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ,ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಅಧ್ಯಕ್ಷ ರಾಮಾಪುರ ರಾಜೇಂದ್ರ ಹೇಳಿದರು.
ಹನೂರು ತಾಲ್ಲೂಕು ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾ ಡಿದ ಅವರು,ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ರೈತರಿಗೆ ಪ್ರಯೋಜವಾಗುತ್ತಿಲ್ಲ.ಎಲ್ಲವೂ ಕಮೀಷನ್ ದಂಧೆಯ ಸರ್ಕಾರಗಳು ದೇಶಕ್ಕೆ ಆಹಾರ ಭದ್ರತೆ ಒದಗಿಸುವ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಯಾ ವುದೇ ಸವಲತ್ತುಗಳು ಸಿಗುತ್ತಿಲ್ಲ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ ಇದರಿಂದ ರೈತರಿಗೆ ಇಪ್ಪತ್ತು ಪರ್ಸೆಂಟ್ ನಷ್ಟವಾಗುತ್ತಿದೆ.ರೈತರ ಬೇಡಿಕೆ ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಡಿ.19 ರಂದು ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗೆ ಜಿಲ್ಲೆಯಿಂದಲೂ ರೈತರು ತೆರಳಲಿದ್ದಾರೆ ಎಂದರು.
ಜಾತಿಗೊಂದು ನಿಗಮ ಮಾಡುವ ಸರ್ಕಾರ ಕಬ್ಬಿಗೆ ಸೂಕ್ತ ಬೆಲೆ ನೀಡುತ್ತಿಲ್ಲ ಹಾಲಿನ ಬೆಲೆಯೂ ಹೆಚ್ಚಿಸಬೇಕು ರೈತ ತನ್ನ ಉತ್ಪನ್ನಗಳನ್ನು ತಯಾರು ಮಾಡಲು ಪಡುವ ಪಕ್ಷದ ಬಗ್ಗೆ ಸರ್ವೆ ಮಾಡಿಸಿ ಆಗ ನಿಮಗೆ ರೈತರ ಕಷ್ಟ ತಿಳಿಯುತ್ತದೆ ಎಂದರು.
ಮುಖಂಡರಾದ ಹರೀಶ್,ಬೋಸ್ಕೊ,ಸದಾನಂದ, ಬಸವರಾಜು,ಮಹೇಶ ಇನ್ನಿತರರು ಇದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ