ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸ್ಥಗಿತಗೊಂಡ ಕರಾಟೆ ಶಿಕ್ಷಕರ ಅನುದಾನ: ರಾಜ್ಯ ಸರ್ಕಾರದ ವಿರುದ್ಧ ಸೆನಸೈ ಶಾಂತಪ್ಪ ಮಾಸ್ಟರ ದೇವರಮನಿ ಆಕ್ರೋಶ

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಸರಕಾರಿ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಲೈಂಗಿಕ ಶೋಷಣೆ ಅನ್ಯಾಯದ ವಿರುದ್ಧ ಹೋರಾಡಲು ದುಷ್ಟಶಕ್ತಿಯನ್ನು ದಮನ ಮಾಡಲು ಶಿಷ್ಟ ಶಕ್ತಿಯನ್ನು ರಕ್ಷಣೆ ಮಾಡಲು ಅಂದಿನ ಸರಕಾರ ವಿದ್ಯಾರ್ಥಿನಿಯರ ಸ್ವಯಂ ರಕ್ಷಣೆಯ ದೃಷ್ಟಿಯಿಂದ 12 ಕೋಟಿ ರೂಪಾಯಿ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿತ್ತು ಕಡ್ಡಾಯವಾಗಿ ಮೂರು ವರ್ಷಗಳವರೆಗೆ ಪ್ರತಿಯೊಬ್ಬ ಹೆಣ್ಣು ಮಕ್ಕಳು ತರಬೇತಿ ಪಡೆದುಕೊಂಡರೆ ಬ್ಲಾಕ್ ಬೆಲ್ಟ್ ಪದವಿ ಪೂರ್ಣಗೊಳಿಸಿದಂತೆ ಆಗುತ್ತದೆ ಎಂದು ಅಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿಕೆ ನೀಡಿದ್ದರು ಆದರೆ ಇಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್ ಸಿ ಮಹದೇವಪ್ಪನವರು ಯಾಕೆ ಮೀನಾ ಮೇಷ ಎಣಿಸುತ್ತಿದ್ದಾರೆ ಎಂಬುವುದು ಗೊತ್ತಾಗುತ್ತಿಲ್ಲ ಕರಾಟೆ ಶಿಕ್ಷಕರ ಅನುದಾನ ಕೆಲವು ಜಿಲ್ಲೆಗಳಲ್ಲಿ ಶಾಲೆಯ ಖರ್ಚು ವೆಚ್ಚಗಳ ಅನುದಾನದಲ್ಲಿ ಕೊಟ್ಟಿದ್ದಾರೆ ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲವೇ ಅಥವಾ ಸರಕಾರ ದಿವಾಳಿಯಾಗಿದೆಯೇ ಎಂಬುವುದು ಯಕ್ಷ ಪ್ರಶ್ನೆಯಾಗಿದೆ ಈ ಕೂಡಲೆ ಕರಾಟೆ ಶಿಕ್ಷಕರ 2022-23ರ ಅನುದಾನವನ್ನು ಬಿಡುಗಡೆ ಗೊಳಿಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಹಾಗೂ ಸರ್ಕಾರಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಪ್ರೌಢಶಾಲೆಗಳಲ್ಲಿ ಮತ್ತು ವಸತಿ ನಿಲಯಗಳಲ್ಲಿ ಕರಾಟೆ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು ಕೆಲಸಕ್ಕೆ ಬಾರದ ಯೋಜನೆಗಳು ಜಾರಿಗೆ ತರುವ ಮುನ್ನ ಇಂತಹ ಕ್ರಾಂತಿಕಾರಕ ಯೋಜನೆಗಳು ಜಾರಿಗೆ ತಂದರೆ ಸರಕಾರಕ್ಕೂ ಶ್ರೇಯಸ್ಸು ಹಾಗೂ ರಾಜ್ಯಕ್ಕೂ ಶ್ರೇಯಸ್ಸು ತಂದಂತಾಗುತ್ತದೆ ಎಂದು ಯಡ್ರಾಮಿ ತಾಲೂಕ ಪ್ರಗತಿಪರ ಚಿಂತಕರು,ವಿಶೇಷ ಕರಾಟೆ ಪರಿಣಿತರು,ಸೇನಸೈ ಶಾಂತಪ್ಪ ಮಾಸ್ಟರ್ ದೇವರಮನಿ ಬಿಳವಾರ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಲವಾರು ಕರಾಟೆ ಶಿಕ್ಷಕರು ತರಬೇತಿ ನೀಡಿದ್ದಾರೆ ಆದರೆ ಅನುದಾನ ಇದುವರೆಗೆ ಬಿಡುಗಡೆ ಆಗಿಲ್ಲ ಕೂಡಲೇ ಬಿಡುಗಡೆಗೊಳಿಸಬೇಕು ಇಲ್ಲದಿದ್ದರೆ ಮುಂದೆ ಬರುವಂತಹ ದಿನಗಳಲ್ಲಿ ಸರಕಾರದ ವಿರುದ್ಧ ಕರಾಟೆ ಶಿಕ್ಷಕರ ಸಹಿ ಸಂಗ್ರಹ ಅಭಿಯಾನ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರು ಎಚ್ಚೆತ್ತುಕೊಂಡು ಸ್ಥಗಿತಗೊಂಡ ಕರಾಟೆ ಶಿಕ್ಷಕರ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಕರಾಟೆ ಶಿಕ್ಷಕರಾದ ಸೆನಸೈ ಶಾಂತಪ್ಪ ಮಾಸ್ಟರ್ ದೇವರಮನಿ ಬೀಳವಾರ ಅವ್ರು ಪತ್ರಿಕಾ ಪ್ರಕಟಣೆಯಲ್ಲಿ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ