ಮೈಸೂರು:ಭ್ರಷ್ಟ ಕಾಂಗ್ರೆಸ್ ಹಗರಣಗಳ ಸರ್ಕಾರದ ವಿರುದ್ಧದ ಸತತ ಒಂದು ವಾರಗಳ ಪಾದಯಾತ್ರೆಯು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ಹಾಗೂ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಯಶಸ್ವಿಯಾಗಿದ್ದು, ಇಂದು ಮಹಾರಾಜ ಮೈದಾನದಲ್ಲಿ ಆಯೋಜಿಸಿದ್ದ ಸಮಾರೋಪ ಸಮಾರಂಭ ಭಾರಿ ಜನ ಬೆಂಬಲದೊಂದಿಗೆ ಜರುಗಿತು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ,ವಿರೋಧ ಪಕ್ಷ ನಾಯಕರಾದ ಶ್ರೀ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ, ಶ್ರೀ ಡಿ.ವಿ.ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ರಾಧಾಮೋಹನ್ ದಾಸ್ ಅಗರ್ವಾಲ್, ಸಹ ಉಸ್ತುವಾರಿಗಳಾದ ಶ್ರೀ ಸುಧಾಕರ್ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ್ ಕಾರಜೋಳ, ಡಾ.ಸಿ.ಎನ್.ಅಶ್ವಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಟಿ.ರವಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶ್ರೀ ಸುರೇಶ್ ಬಾಬು, ಮತ್ತು ಅನೇಕ ನಾಯಕರು ಸೇರಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ವರದಿ-ಧರಿಯಪ್ಪ ಎಲ್ ಕೆ