ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಿಕೆರೆ ಗ್ರಾಮದಲ್ಲಿ ಅಮೃತ ಸರೋವರ ಯೋಜನೆಯಡಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು ಎಂದು ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಹರೀಂದ್ರ ಗೋಪಾಲ್ ರವರು ತಿಳಿಸಿದರು.ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅಮೃತ ಸರೋವರ ಯೋಜನೆಯಡಿ ಇಂದು ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭವಿಷ್ಯಕ್ಕಾಗಿ ನೀರನ್ನು ಸಂರಕ್ಷಿಸುವ ಉದ್ದೇಶದಿಂದ ಸರೋವರಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಜಾರಿಗೆ ತಂದಿದೆ ಎಂದರು. ಇನ್ನೂರಕ್ಕೂ ಹೆಚ್ಚು ವರ್ಷಗಳ ಕಾಲ ಬ್ರಿಟಿಷರ ಕ್ರೂರ ದಾಸ್ಯದಿಂದ ಬಿಡುಗಡೆ ಹೊಂದಿ ನಮ್ಮ ಭಾರತ ದೇಶ ಸ್ವಾತಂತ್ರ್ಯದ ಬೆಳಕನ್ನು ಕಂಡ ಸುದಿನವಿದು. ಇಡೀ ಜಗತ್ತೆ ಒಪ್ಪಿಕೊಂಡಂತೆ ಭಾರತದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಕ್ಕಿಂತ ಹೆಚ್ಚು ಪ್ರಾಮಾಣಿಕವಾಗಿ ಇನ್ನೊಂದು ಸ್ವಾತಂತ್ರ್ಯ ಹೋರಾಟ ಚರಿತ್ರೆಯಲ್ಲಿ ನಡೆದಿಲ್ಲ. ಇಂತಹ ಅಭೂತಪೂರ್ವ ಹೋರಾಟಕ್ಕಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಪ್ರಾಣವನ್ನೇ ಬಲಿದಾನ ಮಾಡಿದ ಎಲ್ಲಾ ಮಹಾನ್ ಚೇತನಗಳಿಗೆ ನನ್ನ ನಮನಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.
ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಿಕೆರೆ ಗ್ರಾಮದ ಕೆರೆಯ ಅಂಗಳದಲ್ಲಿ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಕಲಿಕೆರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ ಎಂ ರಾಮಪ್ರಸಾದ್, ಸದಸ್ಯರುಗಳಾದ ಪ್ರೇಮ್ ಕುಮಾರ್, ಸುರೇಶ್, ಜಿ. ವಿ ಮಂಜುನಾಥ್, ಎ ಎಂ. ನಾರಾಯಣಪ್ಪ, ಸತೀಶ್ ರೆಡ್ಡಿ, ಮುಖಂಡರಾದ ಎ ಕೆ ವೆಂಕಟೇಶ್, ಹರೀಶ್, ಮುನಿರಾಜು (ಮೇಸ್ತ್ರಿ) ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಧರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ಸ್ವರ್ಣಲತ, ಲೆಕ್ಕಾಧಿಕಾರಿ ನಾಗರಾಜ್, ಸಿಬ್ಬಂದಿಗಳಾದ ವೆಂಕಟೇಶಪ್ಪ, ಮಾದೇಶ್, ಮುರುಗೇಶ, ಗ್ರಂಥಾಲಯ ಮೇಲ್ವಿಚಾರಕರಾದ ನಾರಾಯಣಪ್ಪ, ಕಲಿಕೆರೆ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ನಂಜುಂಡಪ್ಪ, ಶಿಕ್ಷಕರಾದ ಚಂದ್ರಕಲಾ, ಮಂಜುಳ, ಜಲಗಾರರಾದ ರವಿ, ವೆಂಕಟಪ್ಪ, ಕೆ. ವಿ ನಾರಾಯಣಸ್ವಾಮಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ-ಆಕರ್ಷ. ಜಿ.