ಬಳ್ಳಾರಿ ನಗರದ ಆರ್ ಟಿ ಓ ಕಛೇರಿಯ ಪ್ರಥಮ ದರ್ಜೆ ಸಹಾಯಕ ಅಧಿಕಾರಿ ಎನ್ ನಾಗೇಶ್ ಅವರು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
ಬುಧವಾರ ಸಾಯಂಕಾಲ ಲೋಕಾಯುಕ್ತ ಡಿ ಎಸ್ ಪಿ ವಸಂತ್ ಕುಮಾರ್ ಮತ್ತು ಪೊಲೀಸ್ ಅರಕಕ್ಷರಾದ ಸಂಗಮೇಶ್ ನೇತೃತ್ವದಲ್ಲಿ ದಾಳಿ ಮಾಡಿ ರೂ.1000 ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಮತ್ತು ಲೋಕಾಯುಕ್ತ ಪೊಲೀಸ್ ಅರಕ್ಷಕರಾದ ಮೊಹಮ್ಮದ್ ರಫಿ ಅವರ ನೇತೃತ್ವದಲ್ಲಿ ಹೊಸಪೇಟೆ ಯ ನಾಗೇಶ್ ಮನೆಯ ಮೇಲೆ ದಾಳಿ ಮಾಡಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು 3 ಲಕ್ಷ ನಗದು ಹಣ ವಶಕ್ಕೆ ಪಡೆದಿದ್ದಾರೆ ಮತ್ತು ಈ ಕುರಿತು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐ ಆರ್ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ.
ವರದಿ ಜಾಫರ್ ಸಾದಿಕ್