ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶರಣರ ವಿಚಾರಧಾರೆ ಬದುಕಿಗೆ ದಾರಿದೀಪ:ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್

ಯಾದಗಿರಿ:ಶರಣರ ವಿಚಾರಧಾರೆ ಬದುಕಿಗೆ ದಾರಿದೀಪವಾಗಿದ್ದು, ನೂಲಿಯ ಚಂದಯ್ಯನವರ ಆದರ್ಶಗಳನ್ನು ಪಾಲಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು. ವಚನ ವಿಚಾರಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ನೂಲಿಯ ಚಂದಯ್ಯ ಜಯಂತ್ಯೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನುಡಿದಂತೆ ನಡೆದ ನೂಲಿ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ. ಇವರ ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳು ಅಡಗಿವೆ. ಇವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡಬೇಕು ಎಂದರು. ಸಮಾಜದ ಜನರು ತಮ್ಮ ಮಕ್ಕಳಿಗೆ ಒಳ್ಳೆಯ ನೀಡುವುದರ ಕಡೆಗೆ ಹೆಚ್ಚು ಗಮನ ವಹಿಸಬೇಕು ಎಂದು ನುಡಿದರು.

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಅಲ್ಲಿಪುರ ಶಾಲೆಯ ಸಹ ಶಿಕ್ಷಕ ಹೀರಣ್ಣ ಭಜಂತ್ರಿ ಮಾತನಾಡಿ, 12ನೇ ಶತಮಾನದ ದಾರ್ಶನಿಕರಾದ ಬಸವಣ್ಣನವರ ಸಮಕಾಲಿನ ಶರಣರಾದ ನುಲಿಯ ಚಂದಯ್ಯ ಅವರು ರಚಿಸಿರುವ ಕಾಯಕ ಮತ್ತು ದಾಸೋಹದಂತಹ ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳು ಅಡಗಿವೆ. ತಮ್ಮ ವಚನಗಳ ಮೂಲಕ ಕಾಯಕ ತತ್ವವನ್ನು ಸಾರಿದ ಶ್ರೇಷ್ಠ ವಚನಕಾರ ನುಲಿಯ ಚಂದಯ್ಯ ಕಾಯಕವನ್ನು ಭಾವಶುದ್ಧವಾಗಿ ಹಾಗೂ ಅಂತಃಕರುಣೆಯ ಮೂಲಕ ಮಾಡಬೇಕೆಂಬುದು ಸಾರಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿಪಾಟೀಲ, ಜಿಲ್ಲಾ ಪಂಚಾಯತ ಸಹ ಕಾರ್ಯದರ್ಶಿ ಜಹೀರ್ ಉಲ್ ಹಸನ್ ಸಮ್ದಾನಿ, ನುಲಿಯ ಚಂದಯ್ಯ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಬಸವರಾಜ ಗಂಗನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಮುಖಂಡರಾದ ಸಿದ್ದು ಭಜಂತ್ರಿ ಹೆಡಗಿಮದ್ರಿ, ಆಂಜನೇಯ ಭಜಂತ್ರಿ ಮಸಕನಳ್ಳಿ, ಬಸಪ್ಪ ಚಟ್ನಳ್ಳಿ, ಮಲ್ಲು ಭಜಂತ್ರಿ ಸುರಪುರ, ಮಲ್ಲಮ್ಮ ಭಜಂತ್ರಿ, ಆಂಜನೇಯ ಭಜಂತ್ರಿ, ಭೀಮರಾಯ ಭಜಂತ್ರಿ, ಆನಂದ ಭಜಂತ್ರಿ ಗೋಪಾಳಪುರ,ಹೊನ್ನಪ್ಪ ಮಾನ್ಪಡೆ, ಯಲ್ಲಪ್ಪ ಭಜಂತ್ರಿ, ಖಂಡಪ್ಪ ಭಜಂತ್ರಿ, ಹಣಮಂತ ಗೋಗಿ, ಹಣಮಂತ, ಮರೆಪ್ಪ ಹೆಡಗಿಮದ್ರಾ, ಭೀಮರಾಯ ಭಜಂತ್ರಿ ಹೋತಪೇಟ, ಭೀಮರಾಯ ಭಜಂತ್ರಿ, ಭೀಮಣ್ಣ ಭಜಂತ್ರಿ ಯಾಳಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ, ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ