ಯಾದಗಿರಿ/ಸುರಪುರ:ಪ್ರಗತಿಪರ ಸಾಧನೆಗಳ ಸರದಾರರು ,ಸಾಮಾಜಿಕ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ದೇವರಾಜ ಅರಸುರವರ 109ನೇ ಜಯಂತಿಯನ್ನು ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ನೂತನ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ರವರು ದೇವರಾಜ ಅರಸು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ, ಸಾಮಾಜಿಕ ಸುಧಾರಣೆಯ ಹರಿಕಾರ ದಿ. ಶ್ರೀ ಡಿ.ದೇವರಾಜ ಅರಸು ರವರು ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಗಳಾಗಿ ಐತಿಹಾಸಿಕ ಬದಲಾವಣೆಗಳನ್ನು ತಂದು ಭೂ ಸುಧಾರಣೆ, ಉಳುವವನೇ ಭೂಮಿಯ ಒಡೆಯ ಎನ್ನುವ ಯೋಜನೆಯ ಮೂಲಕ ಸಣ್ಣ ಹಿಡುವಳಿದಾರ ರೈತರ ಜೀವನಕ್ಕೆ ಹೊಸ ದಿಕ್ಕು ತೋರಿದ ಅವರ ದೂರದೃಷ್ಟಿ ನಾಯಕತ್ವ ನಾಡಿನ ಜನಮಾನಸದಲ್ಲಿ ಅಜರಾಮರವಾಗಿದ್ದು ಅರಸು ಕೊಡುಗೆ ಅಪಾರ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರೆಡ್ಡಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕರಾಗಿ ಆಗಮಿಸಿದ ಸಹಾಯಕ ಖಜಾನಾಧಿಕಾರಿ ಸಣ್ಣಕೆಪ್ಪ ಕೊಂಡಿಕಾರ ರವರು ಡಿ.ದೇವರಾಜ ಅರಸು ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಲಾಯಿತು.
ಉಪ ತಹಶೀಲ್ದಾರ ಮಲ್ಲಯ್ಯ ದಂಡು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಪಾಟೀಲ,ಉಪಖಜಾನೆ ಅಧಿಕಾರಿ ಸಣ್ಣಕೆಪ್ಪ ಕೊಂಡಿಕಾರ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹ್ಮದ್ ಸಲೀಂ, ವಸತಿ ನಿಲಯ ಮೇಲ್ವಿಚಾರಕಿ ಶಾಂತಾಬಾಯಿ ವೇದಿಕೆ ಮೇಲಿದ್ದರು.
ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರು, ವಸತಿ ನಿಲಯಗಳ ವಿದ್ಯಾರ್ಥಿಗಳು, ವಸತಿ ನಿಲಯಗಳ ಮೇಲ್ವಿಚಾರಕರು ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಆನಂದಕುಮಾರ್ ಸ್ವಾಗತಿಸಿದರು, ರಮೇಶ ಮುಷ್ಠೂರಕರ ನಿರೂಪಿಸಿ ವಂದಿಸಿದರು.