ಪಾವಗಡ:ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿ ಶೋಷಿತ ಸಮುದಾಯದ ಧ್ವನಿ ಉಳುವವನೇ ಭೂಮಿಯ ಒಡೆಯ ಎನ್ನುವ ಯೋಜನೆಯನ್ನು ಜಾರಿಗೆ ತಂದ ಧೀಮಂತ ನಾಯಕ ದೇವರಾಜ್ ಅರಸು ಅವರನ್ನು ಎಂದೂ ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಎಚ್.ವಿ.ವೆಂಕಟೇಶ್ ರವರು ತಹಸಿಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದೇವರಾಜ ಅರಸು ಜಯಂತಿಯಲ್ಲಿ ಮಾತನಾಡಿ ಭಾಗವಹಿಸಿ ಮಾತನಾಡಿ ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವರದರಾಜ ರವರು ಮಾತನಾಡಿ ದೇವರಾಜ ಅರಸು ಅವರು ಶೋಷಿತರ, ದೀನದಲಿತರ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರು ಅವರ ಹೆಸರು ಕರ್ನಾಟಕದ ಇತಿಹಾಸದಲ್ಲಿ ಎಂದು ಮರೆಯಲಾಗದಂತೆ ಚಿರಸ್ಥಾಯಿಯಾಗಿ ಉಳಿಯುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಾನಕಿರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದಿರಾಣಮ್ಮ,ಪುರಸಭೆ ಮುಖ್ಯ ಅಧಿಕಾರಿ ಜಾಫರ್ ಷರೀಫ್, ಬಿಸಿಎಂ ಇಲಾಖೆ ಅಧಿಕಾರಿ ಗೋಪಾಲ್,ಆರ್.ಐ.ರಾಜಗೋಪಾಲ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಾಗೇಂದ್ರಪ್ಪ,ಚೆನ್ನಮಲ್ಲಪ್ಪ, ಸಂಘ ಸಂಸ್ಥೆಗಳ ಮುಖಂಡರಾದ ಪಾಳೇಗಾರ ಲೋಕೇಶ್, ಕರವೇ ಲಕ್ಷ್ಮೀನಾರಾಯಣ,ನರಸಿಂಹ ಕೃಷ್ಣ,ದೇವರಾಜ್ ಅರಸು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವರದಿ :ಕೆ.ಮಾರುತಿ ಮುರಳಿ