ಯಾದಗಿರಿ::ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಅವರು ಅಭಿಪ್ರಾಯಪಟ್ಟರು.
ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಬಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಶಿವರಾಜ ಸಾಹುಕಾರ ವಡಗೇರಾ