ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜೀಪುರ ಸಮೀಪದಲ್ಲಿ ಬರುವ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಿದರು.
ಬಹು ನಿರೀಕ್ಷಿತ ಬಹುಕೋಟಿ ವೆಚ್ಚದ ಉಡುತೊರೆ ಜಲಾಶಯ ಸಂಬಂಧಿಸಿದ ನೀರಾವರಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಈ ಭಾಗದ ರೈತರ ಜಮೀನುಗಳಿಗೆ ನೀರಾವರಿ ಕಲ್ಪಿಸುವ ಸದುದ್ದೇಶದಿಂದ ಮಾಡಲಾಗಿರುವ ಜಲಾಶಯದ ಅಚ್ಚು ಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರು ಒದಗಿಸುವ ಹಿನ್ನೆಲೆಯಲ್ಲಿ ಇಲ್ಲಿನ ಸಮಸ್ಯೆಗಳನ್ನು ವಿಸ್ತಾರವಾಗಿ ಅಧಿಕಾರಿಗಳ ಜೊತೆ ಮತ್ತು ನೀರಾವರಿ ಸಚಿವರ ಜೊತೆ ಚರ್ಚಿಸಲಾಗಿದೆ ಮುಂದಿನ ದಿನಗಳಲ್ಲಿ ಈ ಭಾಗದ ರೈತರಿಗೆ ಇದರ ಸದ್ಬಳಕೆ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಮೂಲಕ ಯೋಜನೆ ಸಿದ್ಧಪಡಿಸಲಾಗಿದೆ.
ನಾಲೆಗಳ ದುರಸ್ತಿಗೆ ಕ್ರಮ:
ಎಡದಂಡೆ ಬಲದಂಡೆ ನಾಲೆಗಳ ಒಳಭಾಗದಲ್ಲಿ ಮತ್ತು ಮೇಲ್ಭಾಗದಲ್ಲಿ ಗಿಡ ಗಂಟೆಗಳು ಬೆಳೆದು ನಿಂತಿದ್ದು ಈ ಹಿಂದೆ ಹಲವಾರು ವರ್ಷಗಳಿಂದ ನಾಲೆಯಲ್ಲಿರುವ ರಾಡಿಗಳನ್ನು ಸ್ವಚ್ಛಗೊಳಿಸದೆ ಹಾಗೆ ಇರುವುದರಿಂದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಈ ಬಾರಿಯಾದರೂ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದೇನೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿ ಪ್ರವೀಣ್ , ಮುಖಂಡರುಗಳಾದ ಚಿನ್ನವೆಂಕಟ,ಬಾಬು,ಮುಸ್ತಪ್ಪ,ಡಿ.ಆರ್ ಮಾದೇಶ್,ವಿಜಯ್ ಕುಮಾರ್, ಡಿ.ಕೆ ರಾಜು,ಅತಿಕ್,ಶಿವರುದ್ರ, ಎಸ್.ಆರ್ ಮಹಾದೇವ್,ಸುರೇಶ್ ಹಾಗೂ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್