ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಕೂಲಿ ಮತ್ತು ಸಾಮಾಗ್ರಿ ವೆಚ್ಚ ನೀಡಲಾಗುತ್ತಿದ್ದು, ನೀರಾವರಿ ಸೌಲಭ್ಯ ಹೊಂದಿರುವ ಹಾಗೂ ಜಾಬ್ ಕಾರ್ಡ್ ಹೊಂದಿರುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆ, ಜಾಯಿಕಾಯಿ, ಕೋಕೋ, ಲವಂಗ, ಚಕ್ಕೆ, ತೆಂಗು ಹಾಗೂ ಗೇರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅವಕಾಶ ಕಲ್ಪಿಸಲಾಗಿದೆ.

ಹಾಗೆಯೇ 2024-25 ನೇ ಸಾಲಿನ ಹನಿ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅಡಿಕೆ ಹಾಗೂ ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಈ ಯೋಜನೆಗಳ ಲಾಭ ಪಡೆಯಲು ಇಚ್ಛಿಸುವ ರೈತರು ತೀರ್ಥಹಳ್ಳಿ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ದಿನಾಂಕ: 31-8-2024 ರೊಳಗೆ ಅರ್ಜಿಗಳನ್ನು ಸಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ