ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶ್ರದ್ದೆಯಿಂದ ಅಭ್ಯಾಸ ಮಾಡಿದರೆ ಜೀವನ ಯಶಸ್ವಿ ಸಾಧ್ಯ: ಶಂಕರಯ್ಯ ಅಬ್ಬಿಗೇರಿ ಮಠ

ಕೊಪ್ಪಳ: ಶ್ರದ್ದೆಯಿಂದ ಅಭ್ಯಾಸ ಮಾಡಿದರೆ ಜೀವನ ಯಶಸ್ವಿ ಸಾಧ್ಯವೆಂದು ಇರಕಲ್ಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಂಕರಯ್ಯ ಅಬ್ಬಿಗೇರಿ ಮಠ ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಎರಡನೇ ಸೆಮಿಸ್ಟರ್ ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿಯರು ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಅವರು ಮುಂದುವರೆದು ಮಾತನಾಡಿ ಇಂದು ಹೆಚ್ಚು ಸ್ಪರ್ಧೆ ಇದೆ ಇಂದು ಪ್ರತಿಯೊಂದು ಉದ್ಯೋಗಗಳು ಸ್ಪರ್ಧೆ ಕೇಂದ್ರೀಕೃತವಾಗಿವೆ. ಇಂದು ಉದ್ಯೋಗಗಳಿಗೆ ವ್ಯವಸ್ಥಿತಿವಾಗಿ ತಯಾರಿ ಮಾಡಿಕೊಂಡು ಪರೀಕ್ಷೆ ಬರೆಯುವವರು ಶೇ. 25 ರಷ್ಟು ಮಾತ್ರ.
ನೀವು ಪರೀಕ್ಷೆಗಳಿಗೆ ನೆನೆಪಿಡುವ ತಂತ್ರ ಗಳನ್ನು ಕಲಿಯಬೇಕು.
ನಾವು ಹೆಚ್ಚಾಗಿ ಯಾವುದನ್ನೂ ಓದುತ್ತೇವೋ ಅದು ಚನ್ನಾಗಿ ನೆನುಪು ಇರುತ್ತವೆ. ನೀವು ಪುಸ್ತಕಗಳನ್ನು ಪದೇ ಪದೇ ಓದಬೇಕು ಆಗ ಮಾತ್ರ ಚನ್ನಾಗಿ ನೆನುಪಿರುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರದ ಮುಖ್ಯಸ್ತರಾದ ಶ್ರೀ ವಿಠೋಬ ಎಸ್ ಅವರು ಮಾತನಾಡಿ ಉತ್ತಮ ಮತ್ತು ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸು ಸಾದಿಸಿ ಕುಟುಂಬಕ್ಕೆ ಕಾಲೇಜಿಗೆ ಗೌರವ ತನ್ನಿ,ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಶ್ರಮ ಅವಶ್ಯಕವಾಗಿದೆ.
ವಿಶೇಷವಾಗಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯಗಳು ಬಹಳ ಮುಖ್ಯ.ಅವುಗಳನ್ನು ಅಳವಡಿಸಿಕೊಂಡು ಉತ್ತಮ ಸಾಧನೆಗಳನ್ನು ಮಾಡಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀ ಮತಿ ಸುಮಿತ್ರಾ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಇಲ್ಲಿಯವರೆಗೆ ಸೇಫ್ ಜೋನ್ ನಲ್ಲಿ ಇದ್ದೀರಿ ಆದರೆ ಈಗ ಪ್ರಪಂಚ ಬಹಳ ವಿಶಾಲವಾಗಿದೆ. ಎಲ್ಲರೂ ಧೈರ್ಯವಾಗಿ ಸಮಸ್ಯೆಗಳನ್ನು ಎದುರಿಸಿ ಗೆಲುವು ಪಡೆಯಿರಿ ಎಲ್ಲಾ ವಿದ್ಯಾರ್ಥಿಗಳು ಸಂಪಾದನೆ ಮಾಡಿ ಆಗ ಜೀವನ ಸುಖವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿ ಅವರು ಮಾತನಾಡುತ್ತಾ ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾಗಬೇಕು. ಪದವಿ ಮುಗಿದ ನಂತರ ವಿಧ್ಯಾಬ್ಯಾಸ ನಿಲ್ಲಿಸಬೇಡಿ. ನೀವೆಲ್ಲರೂ ಉನ್ನತ ಶಿಕ್ಷಣ ಪಡೆದು ಸುಖ ಜೀವನ ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನಿಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕಾರದ ಡಾ.ಹುಲಿಗೆಮ್ಮ, ಡಾ. ಪ್ರದೀಪ್ ಕುಮಾರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಗವಿಸಿದ್ದಪ್ಪ ಮುತ್ತಾಳ, ಡಾ. ಮಲ್ಲಿಕಾರ್ಜುನ, ಶ್ರೀ ಮತಿ ನಾಗರತ್ನ ತಮ್ಮಿನಾಳ,ಡಾ.ಅಶೋಕ್ ಕುಮಾರ,ಶ್ರೀ ಮತಿ ಸಂತೋಷಿ ಬೆಲ್ಲದು, ಶ್ರೀ ಮತಿ ಉಮಾದೇವಿ, ಶ್ರೀ ಮತಿ ಪರಿಮಳ, ಎಚ್. ಜಿ ಬೊಮ್ಮನಾಳ ಹಾಗೂ ವಿದ್ಯಾರ್ಥಿನಿಯರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ