ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕು ಮಟ್ಟಕ್ಕೆ ಆಯ್ಕೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಸಮೀಪದ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು 2024-25ನೇ ಸಾಲಿನ ಹುನಗುಂದ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಹುನಗುಂದ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದ ಖೋಖೋ ಪಂದ್ಯಾವಳಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಜಿಹಾಳ ತಂಡದ ವಿರುದ್ಧ ಗೆಲುವು ಸಾಧಿಸಿ ತಾಲೂಕು ಮಟ್ಟಕ್ಕೆ ಅರ್ಹತೆ ಪಡೆದರು.

ವೈಯಕ್ತಿಕ ವಿಭಾಗದಲ್ಲಿ ಅಮೃತಾ ನರಸಪ್ಪನವರ 200 ಮೀ. ಓಟದಲ್ಲಿ ಪ್ರಥಮ ಹಾಗೂ 600ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕಾ ಮಟ್ಟದ ಪ್ರವೇಶ ಪಡೆದರೆ, 200ಮೀ ಓಟದಲ್ಲಿ ನಾಗಪ್ಪ ಸೂಳಿಬಾವಿ ತೃತೀಯ ಸ್ಥಾನ ಪಡೆದರು. ಸಾಮೂಹಿಕ ವಿಭಾಗದಲ್ಲಿ ಬಾಲಕರು ಖೋಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟರು.

ಕೂಡಲಸಂಗಮ, ಧನ್ನೂರು, ಬಿಂಜವಾಡಗಿ, ನಾಗೂರು ಹಾಗೂ ಹುನಗುಂದ ಕ್ಲಸ್ಟರಿನ ವಿವಿಧ ಶಾಲೆಗಳ ಮಕ್ಕಳು ಈ ಕ್ರೀಡಾಕೂಟದಲ್ಲಿ ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದರು.

ವಿಜೇತ ಮಕ್ಕಳನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರಾಮನಗೌಡ ಪವಾಡಿಗೌಡ್ರ, ಉಪಾಧ್ಯಕ್ಷೆ ರತ್ನವ್ವ ಕಡಿವಾಲ, ಸದಸ್ಯರಾದ ಸಂಗಪ್ಪ ಈರಣ್ಣವರ, ಬಸಪ್ಪ ಬಾರಕೇರ, ಮಲ್ಲೀಕಸಾಬ ನದಾಫ, ಗ್ರಾ.ಪಂ. ಸದಸ್ಯ ವೀರಪ್ಪ ಮಾಗಿ, ವೀರಭದ್ರಪ್ಪ ಕೊಳ್ಳೊಳ್ಳಿ, ಕೂಡ್ಲಯ್ಯ ಹಿರೇಮಠ, ಲಕ್ಷ್ಮಪ್ಪ ಮಾದರ, ನಾಗೂರು ಸಿಆರ್ಪಿ ಸಂಗಪ್ಪ ಚಲವಾದಿ, ಪ್ರಭಾರಿ ಮುಖ್ಯಗುರು ಎಂ ಜಿ ಬಡಿಗೇರ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!