ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಟೌನ್ ಹಾಲ್ ನಲ್ಲಿ ಮಂಗಳವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಿಲ್ಲಾ ಮಟ್ಟದ ಜಯಂತ್ಯೋತ್ಸವ ಜಿಲ್ಲಾಡಳಿತ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಸಹಯೋಗದಲ್ಲಿ ನಡೆಯಿತು. ಈ ವೇಳೆ ಶಾಸಕ ಶಿವರಾಮ್ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್ ಶಿವಶರಣರ ಬದುಕು ನಮಗೆ ಆದರ್ಶ ಪ್ರಾಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದರು.
ರಾಜ್ಯ ಘಟಕದ ಅಧ್ಯಕ್ಷ ಸಿದ್ದು ಹಡಪದ ಪ್ರಾಸ್ತಾವಿಕ ಮಾತನಾಡಿ ಹಿಂದಿನ ಸರಕಾರದಲ್ಲಿ ಉಮಾಶ್ರೀ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಆಗಿದ್ದಾಗ ಸಮಾಜದ ಮನವಿಯಂತೆ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟರು.
ಶಿವರಾಮ್ ಹೆಬ್ಬಾರ್ ಅವರು ಹಡಪದ ಸಮಾಜಕ್ಕೆ ಹೆಬ್ಬಾರ್ ನಗರದಲ್ಲಿ 5 ಗುಂಟೆ ಸ್ಥಳಾವಕಾಶ ನೀಡಿದ್ದಾರೆ ಎಂದು ಸ್ಮರಿಸಿದರು.
ಇದೇ ವೇಳೆ ಮಾತನಾಡಿದ ಕಾರ್ಯಕ್ರಮ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು ಹಡಪದ ಸಮಾಜದ ಬಂಧುಗಳು ಶ್ರಮಜೀವಿಗಳು ,ಸಮಾಜ ಸಶಕ್ತವಾಗಿ ಏಳಿಗೆ ಆಗಬೇಕಾದರೆ ಕುಡಿತ ಎನ್ನುವ ಮಹಾಮಾರಿ ಇಂದ ಪಾರಾಗಬೇಕು ಆಗ ಮಾತ್ರ ಸಮಾಜ ಆರ್ಥಿಕವಾಗಿ ಸಾಮಾಜಿಕವಾಗಿ ಪ್ರಗತಿ ಹೊಂದಲು ಸಾಧ್ಯ ಎಂದರು.
ಇದೆ ವೇಳೆ ಶಿರಸಿ ಉಪ ವಿಭಾಗದ ಸಹಾಯಕ ಆಯುಕ್ತರಾದ ಕಾವ್ಯಾ ರಾಣಿ ಅವರು ,ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಲ್ ಟಿ ಪಾಟೀಲ್, ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜ್ಞಾನದೇವ ಗುಡಿಯಾಳ, ಹುನಗುಂದ ಸಹಕಾರಿ ಸಂಘದ ಅಧ್ಯಕ್ಷರಾದ ಎಚ್ಚ ಎಂ ನಾಯ್ಕ ಸೇರಿದಂತೆ ಹಡಪದ ಸಮಾಜದ ಮುಖಂಡರು ಹಾಜರಿದ್ದರು.