ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಯ ಶಿಕ್ಷಕರಾದ ಸಿ.ಆರ್.ಸುರೇಶ (ಚೌಡ್ಲಾಪುರ ಸೂರಿ)ರವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ವಿನಾಯಕ ಸೇವಾ ಸಮಿತಿ ಹಾಗೂ ಸುಂಕದಗದ್ದೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಟಿವಿ9 ವರದಿಗಾರರಾದ ಅವಿನಾಶ್ ರವರು ಮಾತನಾಡಿ ಸಿ ಆರ್ ಸುರೇಶ್ ರವರು ಒಂದು ವರ್ಷದ ಅವಧಿಯಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಸುಂಕದಗದ್ದೆ ಶಾಲೆಗೆ ಎರಡು ಲಕ್ಷದ ನಲವತ್ತು ಸಾವಿರದ ವಸ್ತುಗಳನ್ನು ಹಾಗೂ ಇತರೆ ಶಾಲೆಗೆ ಮೂರು ಲಕ್ಷಕ್ಕೂ ಹೆಚ್ಚಿನ ದೇಣಿಗೆಯನ್ನು ಕೊಡಿಸಿದ್ದಾರೆ. ಇಲ್ಲಿಯವರೆಗೆ ಇವರ ಸೇವಾವಧಿಯಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚಿನ ದೇಣಿಗೆ ಕೊಡಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವೀಂದ್ರ ಕುಕ್ಕುಡಿಗೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ವಥ್, ಬಿ ಜೆ ಪಿ ಮುಖಂಡರಾದ ಅರೇನೂರು ಸಂತೋಷ, ಪಬ್ಲಿಕ್ ಇಪ್ಯಾಕ್ಟ ಟಿವಿ ಮುಖ್ಯಸ್ಥರು, ಗ್ರಾಮ ಪಂಚಾಯತ್ ಸದಸ್ಯರಾದ ನಟರಾಜ್, ಪವಿತ್ರ, ಪ್ರಶಾಂತ್,ಕಾರ್ತಿಕ್,ವಿನಾಯಕ ಸೇವಾ ಸಮಿತಿ ಅಧ್ಯಕ್ಷರಾದ ಶಂಕರ್, ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು, ಭಕ್ತರು, ಶಾಲೆಯ ಶಿಕ್ಷಕರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.