ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕ್ರೀಡಾಕೂಟದಲ್ಲಿ ಭಾಗವಹಿಸಿ ಕೋಟಿ ಬೆಳಗುವುದ ಮೂಲಕ ಚಾಲನೆ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ಅವರು ಭಾಗವಹಿಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಹನೂರು ತಾಲೂಕು ಕ್ರೀಡಾಂಗಣವನ್ನು ಇನ್ನೂ ಉನ್ನತ ಮಟ್ಟಕ್ಕೆ ಏರಿಸಲು ಸಂಬಂಧಪಟ್ಟವರ ಜೊತೆ ಚರ್ಚೆ ಮಾಡಿದ್ದೇನೆ ಮುಂದಿನ ದಿನಗಳಲ್ಲಿ ಇದನ್ನು ಮಾಡಲಾಗುವುದು ಎಂದರು ನಂತರ ನಮ್ಮ ಹನೂರು ಕ್ಷೇತ್ರದ ಕ್ರೀಡಾಪಟುಗಳು ಜಿಲ್ಲೆಯಿಂದ ರಾಜ್ಯ ಮತ್ತು ರಾಷ್ಟ್ರೀಯ ಅಂತರಾಷ್ಟ್ರೀಯಗಳಲ್ಲಿ ಪ್ರತಿನಿಧಿಸಬೇಕು ಇದಕ್ಕೆ ದೈಹಿಕ ಶಿಕ್ಷಕರು ಹಾಗೂ ಜನಪ್ರತಿನಿಧಿಗಳ ಸಹಕಾರ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಬೇಕಾಗಿರುತ್ತದೆ ನಾನು ಸಹ ಮುಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡಿ ಕ್ರೀಡಾಪಟುಗಳಿಗೆ ಉತ್ತೇಜನ ತುಂಬುವ ಕಾರ್ಯ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ ತಾಲ್ಲೂಕು ದೈಹಿಕ ಪರಿವೀಕ್ಷಕರಾದ ಮಹಾದೇವ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಸುರೇಶ್ ನಾಯ್ಡು,ಹನೂರು ಪಟ್ಟಣ ಪಂಚಾಯತಿ ಅಧ್ಯಕ್ಷ ರಾದ ಮುಮ್ತಾಜ್ ಬಾನು,ಉಪಾಧ್ಯಕ್ಷರಾದ ಆನಂದ್ ಕುಮಾರ್ , ಸದಸ್ಯರುಗಳಾದ ಪವಿತ್ರ ಪ್ರಸನ್ನ,ಮಹೇಶ್ ಕುಮಾರ್, ನಾಯ್ಡು,ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಉಸ್ಮಾನ್ ಖಾನ್