ಪಾವಗಡ : ಪಟ್ಟಣದಲ್ಲಿ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚಣೆಯನ್ನು ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಿಸಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಇಂದು ಅಂತರಾಷ್ಟ್ರೀಯ ಪ್ರಜಾಪ್ರಭತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳು,ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ರೆಡ್ ಕ್ರಾಸ್, ಎನ್,ಸಿ,ಸಿ ವಿದ್ಯಾರ್ಥಿಗಳು, ಯುವಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಸಮಾಜ ಕಲ್ಯಾಣ ಇಲಾಕೆ ಅಧಿಕಾರಿ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ,ಸಂಘ ಸಂಸ್ಥೆಗಳ ಮುಖಂಡರಾದ ಕೃಷ್ಣ ಮೂರ್ತಿ, ಪೆದ್ದನ್ನ, ನಾಗರಾಜ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ವರದಿ.ಪಾವಗಡ. ಕೆ.ಮಾರುತಿ ಮುರಳಿ