ಮೈಸೂರು: ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘ ದಿಂದ ಯಾವುದೇ ಸರ್ಕಾರಿ ಜಾಗದಲ್ಲಿ ಮುಡಾ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಲೇಔಟ್ ನಿರ್ಮಾಣ ಮಾಡಿಲ್ಲ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕಳೆದ 27 ವರ್ಷಗಳಿಂದ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಎಚ್. ವಿ. ರಾಜೀವ್ ಅವರು ಯಾವುದೇ ಸರ್ಕಾರಿ (ರೆವಿನ್ಯೂ,ಟಿ,ಟಿ,ಸಿ, )ಜಾಗದಲ್ಲಿ ಲೇಔಟ್ ಮಾಡಿಲ್ಲ ಹಣಕೊಟ್ಟು ಭೂಮಿ ಖರೀದಿಸಿ ಲೇಔಟ್ ಮಾಡಿದ್ದಾರೆ ಎಂದು ತೇಜಸ್ವಿ ತಿಳಿಸಿದ್ದಾರೆ.
ಕೆಲವು ದಿನಗಳಿಂದ ರಾಜೀವ್ ಅವರ ಕುರಿತು ಈ ರೀತಿಯ ಸುಳ್ಳು ಸುದ್ದಿಯನ್ನು ಕೆಲವರು ಹಬ್ಬಿಸುತ್ತಿದ್ದಾರೆ,ಈ ಮೂಲಕ ರಾಜೀವ್ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈಗಾಗಲೇ ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಮೇತ ಮಾಧ್ಯಮಗಳಿಗೆ ವಿವರಿಸಿರುವ ರಾಜೀವ್ ಅವರು ಕೆರ್ಗಳ್ಳಿ, ನೇಗರ್ತಳ್ಳಿ, ಬಲ್ಲಳ್ಳಿ, ಜಾಗದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಬಡಾವಣೆ ನಿರ್ಮಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜೀವ್ ಅವರು ಕಳೆದ ಮೂರ ದಶಕಗಳಿಂದ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ ಮತ್ತು ಮೂಡ ಅಧ್ಯಕ್ಷರಾಗಿದ್ದ ಅವಧಿಯಲ್ಲೂ ಕೂಡ ಯಾವ ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ನಿರ್ವಹಿಸಿದ್ದಾರೆ ಎಂದು ತೇಜಸ್ವಿ ತಿಳಿಸಿದ್ದಾರೆ.
ರಾಜೀವ್ ಅವರ ಮೇಲಿನ ಆರೋಪಿಗಳು ಸತ್ಯಕ್ಕೆ ದೂರವಾದುದು ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಿ ಅವರ ಘನತೆಗೆ ಚ್ಯುತಿ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.