ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ :ಎಚ್ ವಿ ವೆಂಕಟೇಶ್

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ನೀಡಲಾಗುವುದು ಮತ್ತು‌ ಬಗರ್ ಹುಕುಂ ಯೋಜನೆ ಫಲಾನುಭವಿಗಳಿಗೆ ತ್ವರಿತವಾಗಿ ಸಾಗುವಳಿ ಚೀಟಿಗಳನ್ನು ನೀಡಲಾಗುವುದು ಎಂದು ಶಾಸಕರಾದ ಎಚ್ ವಿ ವೆಂಕಟೇಶ್ ರವರು ತಿಳಿಸಿದರು.

ತಾಲ್ಲೂಕಿನ ವದನಕಲ್ಲು ಗ್ರಾಮ ಪಂಚಾಯಿತಿಯ ಲಿಂಗದಳ್ಳಿ ಗ್ರಾಮದಲ್ಲಿ 2023-24 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಂಗಳವಾರ ವಿವಿಧ ರೀತಿಯ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆಗಳನ್ನು ನೆರವೇರಿಸಿ ನಂತರ ಅವರು ಮಾತನಾಡುತ್ತಾ ಬಗರ್ ಹುಕ್ಕಂ ಯೋಜನೆಯ ಸುಮಾರು 750 ಫಲಾನುಭವಿಗಳಿಗೆ ಈ ತಿಂಗಳ ಒಳಗೆ ಸಾಗುವಳಿ ಚೀಟಿಯನ್ನು ನೀಡಲಾಗುವುದು. ಈ ವಿಚಾರಕ್ಕೆ ಸಂಬಂಧಪಟ್ಟಂತಹ ಕಾಗದ ಪತ್ರಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

ಲಿಂಗದಹಳ್ಳಿ ಗ್ರಾಮದ ಆದಿ ಕರ್ನಾಟಕ ಕಾಲೋನಿಯಲ್ಲಿ 10 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು ಮತ್ತು 15 ಲಕ್ಷ ವೆಚ್ಚದ ಸಿಸಿ ರಸ್ತೆ ,ಭೋವಿ ಕಾಲೋನಿಯಲ್ಲಿರುವ ಶ್ರೀರಾಮ ದೇವಸ್ಥಾನದ ಬಳಿ 10 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಮತ್ತು 99 ಲಕ್ಷ ರೂಪಾಯಿಗಳ ಜೆಜೆಎಂ ಯೋಜನೆ ಅಡಿಯಲ್ಲಿ ಮನೆ ಮನೆಗೆ ನೀರನ್ನು ನೀಡಲಾಗುವುದು‌. 20 ಲಕ್ಷ ವೆಚ್ಚದಲ್ಲಿ ನೂತನ ಅಂಗನವಾಡಿ ಕೇಂದ್ರ ನಿರ್ಮಿಸಲಾಗುವುದು. ಹಾಗೂ 5 ಲಕ್ಷ ವೆಚ್ಚದಲ್ಲಿ ನೂತನ ಬಸ್ ಶೆಲ್ಟರ್ ನಿರ್ಮಾಣ ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕಾಗಿ 5ಲಕ್ಷ ನೀಡಲಾಗಿದೆ.

ಮನೆಮನೆಗೆ ಶುದ್ಧ ಕುಡಿಯುವ ನೀರು ನೀಡುವ ಯೋಜನೆಯದ ಜೆಜೆಎಮ್ ಕಾಮಗಾರಿಯೂ ಬಹುತೇಕ ಮುಗಿಯುವ ಹಂತದಲ್ಲಿದ್ದು ಈಗಾಗಲೇ ಕೆಲವು ಕಡೆಗಳಲ್ಲಿ ಪ್ರಾಯೋಗಿಕವಾಗಿ ನೀರನ್ನು ಹರಿಸಲಾಗಿದೆ. ಇನ್ನೂ ತುಮಕೂರು ರಾಯದುರ್ಗ ರೈಲ್ವೆ ಮಾರ್ಗವೂ ಪ್ರಗತಿ ಹಂತದಲ್ಲಿದೆ. ಹಾಗೂ ತಾಲ್ಲೂಕಿನ ಕೆರೆಗಳಿಗೆ ನೀರನ್ನು ತುಂಬಿಸುವ ಶಾಶ್ವತ ನೀರಾವರಿ ಯೋಜನೆಯಾದ ತುಂಗಭದ್ರ ಯೋಜನೆ ಕಡೆಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಕೆ ಎಸ್ ಪಾಪಣ್ಣ ,ಸಣ್ಣ ರಾಮರೆಡ್ಡಿ ,ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀರಾಮಪ್ಪ , ಉಪಾಧ್ಯಕ್ಷೆ ಜಯಮ್ಮ ತಿಪ್ಪೇಸ್ವಾಮಿ, ಮದನ್ ರೆಡ್ಡಿ , ಹನುಮೇಶ್, ಶ್ರೀರಾಮರೆಡ್ಡಿ , ವೇಣು ಗೋಪಾಲ ರೆಡ್ಡಿ ,ರಾಮಲಿಂಗ ರೆಡ್ಡಿ , ಚಿಟ್ಟಿ , ಕರಿಯಣ್ಣ ,ಚಂದ್ರಶೇಖರ ರೆಡ್ಡಿ, ದೊಡ್ಡೇನಹಳ್ಳಿ ಮಾರಣ್ಣ ,ಈರಪ್ಪ ರೆಡ್ಡಿ ,ಲಾಯರ್ ನಾಗರಾಜ್ , ವಿರೇಶ್ , ಧನಂಜಯ ಸೇರಿ ಇನ್ನೂ ಹಲವು ಮುಖಂಡರು ಉಪಸ್ಥಿತರಿದ್ದರು.

ವರದಿ. ಪಾವಗಡ. ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ