ಶಿವಮೊಗ್ಗ : ತುಂಗಭದ್ರಾ ನದಿಗಳ ಪವಿತ್ರ ಸಂಗಮ ಕ್ಷೇತ್ರವಾದ ಕೂಡಲಿಯಲ್ಲಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಕೂಡಲಿ ಶೃಂಗೇರಿ ಮಹಾಸಂಸ್ಥಾನ ದಕ್ಷಿಣಾಮ್ನಾಯ ಮೂಲ ಶ್ರೀ ಶಾರದಾ ಪೀಠಮ್‍ನ 71ನೇ ಪೀಠಾಧಿಪತಿಗಳಾದ ಶ್ರೀ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮಿಗಳವರು ಮಂಗಳವಾರ ಚಾರುರ್ಮಾಸ್ಯ ವ್ರತಾಚರಣೆಯನ್ನು ಪೂರೈಸಿ ಸಮಾಪನಗೊಳಿಸಿದರು.
ಈ ಸಂದರ್ಭದಲ್ಲಿ ಮುಕ್ತರಾಗಿರುವ ಹಿಂದಿನ ಪೀಠಾಧಿಪತಿಗಳ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದ ನಂತರ ಸಾಯಂಕಾಲ ಪಿಳ್ಳಂಗಿರಿಯ ಶ್ರೀ ವೆಂಕಟರಮಣ ದೇವಾಲಯಕ್ಕೆ ತೆರಳಿ ಸೀಮೋಲ್ಲಂಘನ ಕಾರ್ಯಕ್ರಮ ನಡೆಸಿದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ