ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿಯಲ್ಲಿ ಸ್ವಾಮಿತ್ವ ಯೋಜನೆಯ ಗ್ರಾಮ ಸಭೆಯನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು.
ಈ ವೇಳೆ ಶಾಸಕ ಎಂ ಆರ್ ಮಂಜುನಾಥ್ ರವರು ಮಾತನಾಡಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಈ ಸ್ವತ್ತುಗಳ ಸಮಸ್ಯೆಗಳನ್ನು ಬಗೆಹರಿಸಲು ವಸತಿ ಪ್ರದೇಶಗಳಿಗೆ ಡ್ರೋನ್ ಅಥವಾ ಯುಎ ವಿ ತಂತ್ರಜ್ಞಾನದ ಮೂಲಕ ಸರ್ವೇ ನಡೆಸಿ ಡ್ರೋನ್ ಮುಖಾಂತರ ನಿಮ್ಮ ಜಾಗದ ಅಳತೆಯನ್ನು ನಡೆಸಿ ನಿಮಗೆ ಪಿ ಆರ್ ಕಾಡುಗಳನ್ನು ವಿತರಣೆ ಮಾಡಲಾಗುತ್ತದೆ ಇದನ್ನು ಜನರು ಸದುಪಯೋಗ ಪಡೆದುಕೊಳ್ಳಬೇಕು, ಇಂದಿನ ದಿನಗಳಲ್ಲಿ ತಂತ್ರಜ್ಞಾನ ಬೆಳೆದಿದೆ ಅದನ್ನು ನಾವು ಸದುಪಯೋಗ ಪಡೆದುಕೊಂಡು ನಮ್ಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್, ಎಡಿಎಲ್ಆರ್ ವಿಧ್ಯಾಯನಿ ನಟರಾಜು, ಸರ್ವೆ ಸೂಪರ್ವೈಸರ್ ಭಾನುರೇಖಾ, ಅಜ್ಜೀಪುರ ಗ್ರಾಮ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ನಂದೀಶ್, ಅಜ್ಜೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರನಾಯಕ , ಉಪಾಧ್ಯಕ್ಷರಾದ ಪ್ರಭುಸ್ವಾಮಿ,ಸದಸ್ಯರಾದ ಚಂದ್ರ ಮುರಳಿ ,ರಾಜೇಂದ್ರ,ಸೈಯದ್ ಜಬ್ಬಾರ್,ಕೃಷ್ಣಮೂರ್ತಿ,ಶಿವಮೂರ್ತಿ,ರಾಜೇಂದ್ರ, ಮಹದೇವ,ರುಕ್ಮಿಣಿ,ಗೀತಾ,ಹಾಗೂ ಪಂಚಾಯಿತಿ ಸಿಬ್ಬಂದಿಗಳು , ಗ್ರಾಮಸ್ಥರು ಇನ್ನಿತರರು ಉಪಸ್ಥಿತರಿದ್ದರು .
ವರದಿ: ಉಸ್ಮಾನ್ ಖಾನ್