ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅನಧಿಕೃತ ನಕಲಿ ಮಧ್ಯಪಾನ ಮಾರಾಟ ರಾಜಾ ರೋಷವಾಗಿ ನಡೆಯುತ್ತಿದೆ ಪೊಲೀಸ್ ಇಲಾಖೆಯ ಭಯವಿಲ್ಲದೆ ಅಬಕಾರಿ ಇಲಾಖೆಯ ಅಧಿಕಾರಿಗಳ ಭಯವಿಲ್ಲದೆ ನಕಲಿಸರಾಯಿ ಮಾರಾಟ ಎಗ್ಗಿಲದೇ ನಡೆಯುತ್ತಿದೆ ಇದುವರೆಗೆ ಈ ವಿಷಯದ ಕುರಿತು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ವತಿಯಿಂದ ಸಲ್ಲಿಸಲಾಗಿದೆ ಆದರೆ ಇದುವರೆಗೂ ಅನಧಿಕೃತ ಸಾರಾಯಿ ಮಾರಾಟ ಮಾಡುವವರಿಗೆ ಯಾವುದೇ ರೀತಿಯ ಶಿಸ್ತು ಕ್ರಮ ಕೈಗೊಳ್ಳದಿರುವುದು ಖಂಡನಾರ್ಹವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ತಾಲೂಕ ಅಧ್ಯಕ್ಷರಾದ ಸಿದ್ದಲಿಂಗ ಪೂಜಾರಿ ಹಾಲಗಡ್ಲಾ ಅವರು ಆಕ್ರೋಶವನ್ನು ವ್ಯಕ್ತಪಡಿಸಿದಾರೆ ಅತೀ ಶೀಘ್ರದಲ್ಲಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ವತಿಯಿಂದ ಕಲ್ಬುರ್ಗಿ ಜಿಲ್ಲೆಯ ಅಬಕಾರಿ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಾಲೂಕ ಅಧ್ಯಕ್ಷರಾದ ಸಿದ್ದಲಿಂಗ ಪೂಜಾರಿ ಹಾಲಗಡ್ಲಾ ಅವರು ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.