ತುಮಕೂರು/ತಿಪಟೂರು – ತಾಲೂಕಿನ ಕರಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮೂರನೇ ವರ್ಷದ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕೆ ಆರ್ ದೇವರಾಜು ರವರು ನಮ್ಮ ಸಂಘವನ್ನು ಪ್ರಾರಂಭಿಸಲು ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿದ್ದು, ಕೆಲವು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ಸಾಧ್ಯವಾಗಿರಲಿಲ್ಲ. ಆದರೆ ಸಹಕಾರ ಸಚಿವರಾದ ಕೆಎನ್ ರಾಜಣ್ಣನವರು ಮಾಜಿ ಸಚಿವರಾದ ಜೆ ಸಿ ಮಾಧುಸ್ವಾಮಿ ,ಬಿ ಸಿ ನಾಗೇಶ್ ರವರ ಸಹಕಾರದೊಂದಿಗೆ ಸಂಘವನ್ನು ಪ್ರಾರಂಭಿಸಿದ್ದು, ಇಂದು ಸಣ್ಣದಾಗಿ ಪ್ರಾರಂಭಿಸಿರುವ ಸಂಘವನ್ನು ಮುಂದೆ ಹೆಮ್ಮರವಾಗಿ ಬೆಳೆಸಬೇಕೆಂದು ಸದಸ್ಯರಿಗೆ ಕರೆ ನೀಡಿದರು. ಕೆಲವು ದುಷ್ಟರು ಎಷ್ಟೇ ಪ್ರಯತ್ನಿಸಿದರೂ ಅಂತಿಮವಾಗಿ ಸತ್ಯಕ್ಕೆ ಗೆಲುವು ಎಂಬಂತೆ ನಮ್ಮ ಸಂಘವನ್ನು ಪ್ರಾರಂಭಿಸಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.ರೈತರು ಖಾಸಗಿ ಡೈರಿಗಳಿಗೆ ಬಲಿಯಾಗದೆ ನಂದಿನಿ ಡೈರಿಗಳಿಗೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡಿ ಹೆಚ್ಚಿನ ದರ ಪಡೆಯಬೇಕೆಂದು ತಿಳಿಸಿದರು.
ಸಭೆಯಲ್ಲಿ ಅತಿಥಿಗಳಾಗಿ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಿ ಇ ಓ ಮನು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾದ ಕೆ ಜಿ ರಂಗಸ್ವಾಮಿ ದಯಾನಂದ ಸ್ವಾಮಿ ಉಮೇಶ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಿರಣ್ ಹಾಲು ಪರೀಕ್ಷೆ ಕ ಮಲ್ಲಿಕಾರ್ಜುನಯ್ಯ ಸೇರಿದಂತೆ ಸದಸ್ಯರು ಹಾಗೂ ಹಾಲು ಉತ್ಪಾದಕರು ಭಾಗವಹಿಸಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.