ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

“ಚಟುವಟಿಕೆಗೆ ಹೃದಯವನ್ನು ಬಳಸಿ” ಡಾ|| ಲಿಂಗರಾಜು ಟಿ.

ಕೊಪ್ಪಳ:ಹೃದಯವು ಮಾನವ ದೇಹದ ಪ್ರಮುಖ ಅಂಗಾಗಳಲ್ಲಿ ಒಂದಾಗಿದೆ ಅದರ ಅಸಮರ್ಪಕ ಕಾರ್ಯವು ಮಾರಣಾಂತಿಕತೆಗೆ ಕಾರಣವಾಗಬಹುದು ಆದಕಾರಣ ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಅವಶ್ಯಕವಾಗಿರುತ್ತದೆ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಲಿಂಗರಾಜು ಟಿ ಅವರು ಹೇಳಿದರು.
ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್.ಸಿ.ಡಿ. ಕೋಶ ಕೊಪ್ಪಳ, ಜಿಲ್ಲಾ ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್ ಕೊಪ್ಪಳ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಯವರಿಗೆ ಸೋಮವಾರದಂದು ಹಮ್ಮಿಕೊಂಡಿದ್ದ “ವಿಶ್ವ ಹೃದಯ ದಿನ” ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟನೆಮಾಡಿ ಮಾತನಾಡಿದರು.
ಹೃದಯ ರಕ್ತನಾಳದ ಆರೋಗ್ಯ ಮತ್ತು ಕೆಲವು ಜೀವನಶೈಲಿಯ ಅಭ್ಯಾಸಗಳ ಬಗ್ಗೆ ಅರಿವಿನ ಕೋರತೆಯಿಂದಾಗಿ ಹೃದಯ ರಕ್ತನಾಳದ ಕಾಯಿಲೆಗಳು ಮರಣಕ್ಕೆ ಪ್ರಮುಖ ಕಾರಣಗಳಾಗಿರುತ್ತವೆ. ಆರಂಭಿಕ ಚಿನ್ಹೆಗಳು ಮತ್ತು ರೋಗ ಲಕ್ಷಣಗಳನ್ನು ಅರ್ಥಮಾಡಿಕೊಳ್ಳುವುದು ಹಾಗೂ ತೊಡಕುಗಳನ್ನು ತಪ್ಪಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಜಡ ಜೀವನ ಶೈಲಿಯನ್ನು ತಪ್ಪಿಸುವುದು, ಸಕ್ರಿಯ ಜೀವನ ಶೈಲಿಯ ತೊಡಗಿಸಿಕೊಳ್ಳುವುದು ಎಂದು ಎಲ್ಲಾ ವಿದ್ಯಾರ್ಥಿನಿಯರಿಗೆ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ|| ನಂದಕುಮಾರ ಇವರು “ವಿಶ್ವ ಹೃದಯ” ದಿನಾಚರಣೆಯ ಹಾಗೂ ಚಟುವಟಿಕೆಗೆ ಹೃದವನ್ನು ಬಳಸಿ ಎಂಬ ಘೋಷವಾಕ್ಯಕ್ಕೆ ಪೂರಕವಾಗಿರುವ ಆಹಾರ ವಿಹಾರ ಮತ್ತು ದೈನಂದಿಕ ಜೀವನ ಶೈಲಿ ಕುರಿತು ಮಾತನಾಡಿದರು ಮತ್ತು ಡಾ|| ಪುನೀತ ರಾಜಕುಮಾರ ಹೃದಯ ಜ್ಯೋತಿ ಯೋಜನೆ ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದ್ದು, ಅದರ ಸದುಪಯೋಗ ಕುರಿತು ಮಾಹಿತಿ ನೀಡಿದರು ಹೃದಯ ಕಾಯಿಲೆಯ ಗಂಡಾಂತರ ಅಂಶಗಳು, ಅಹಿತಕರ ಆಹಾರ ಸೇವನೆ, ಅಧಿಕ ತೂಕ, ದೈಹಿಕ ಮತ್ತು ಕ್ರೀಡಾಚಟುವಟಿಕೆಗಳ ನೂನತೆ ಕುರಿತು ತಿಳಿಸಿದರು ಹಾಗೂ ೩೦ ವರ್ಷ ಹಾಗೂ ಮೇಲ್ಪಟ್ಟ ಎಲ್ಲಾ ವಯಸ್ಸಿನವರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು,
ಕಾಲೇಜಿನ ಪಾಂಶುಪಾಲರಾದ ಡಾ|| ಗಣಪತಿ ಲಮಾಣಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಇತ್ತೀಚಿಗೆ ಸಣ್ಣ ಸಣ್ಣ ವಯಸ್ಸಿನಲ್ಲಿ ಹೃದಯ ಸಂಬಂಧಿ ಖಾಯಲೆಗಳು ಹೆಚ್ಚಾಗುತ್ತಿವೆ ನಮ್ಮಲ್ಲಿ ಒತ್ತಡದ ಜೀವನ ಹೆಚ್ಚಾಗಿದೆ ನಾವು ಸೇವಿಸುವ ಅಹಾರ ಶೈಲಿಯು ಬದಲಾಗಿದೆ, ನಮ್ಮ ಜೀವನ ಪದ್ದತಿಯನ್ನು ಬದಲಾಯಿಸಿಕೊಳ್ಳಬೇಕು, ವ್ಯಾಯಾಮ ಯೋಗ ಮಾಡಬೇಕು ಇವರಿಂದ ರೋಗಗಳು ಬರದಂತೆ ತಡೆಗಟ್ಟಬಹುದು ಎಂದರು.
ಡಾ ಪ್ರದೀಪ್ ಕುಮಾರ್ ಯು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರು ಇವರು ಮಾತನಾಡುತ್ತಾ ನಮ್ಮ ದೇಹದಲ್ಲಿ ನಿರಂತರವಾಗಿ ಕೆಲಸಮಾಡುವ ಏಕೈಕ ಅಂಗವೆಂದರೆ ಅದು ಹೃದಯ. ನಮ್ಮ ಹೃದಯವು ನಮಗೆ ಏನನ್ನೂ ಕೇಳುವುದಿಲ್ಲ ಅದು ಕೇಳುವುದು ಕೇವಲ ಚಟುವಟಿಕೆಯಿಂದ ಕೂಡಿದ ದಿನಚರಿ, ಹಾಗಾಗಿ ನಾವು ನಿರಂತರ ಚಟುವಟಿಕೆಯಿಂದ ಇರಬೇಕು. ಸಾಧ್ಯವಾದರೆ ಒಂದು ಕ್ರೀಡೆಯನ್ನು ದಿನನಿತ್ಯ ಆಡುವುದನ್ನು ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪೌಷ್ಟಿಕ ಮಾಸಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ಪೂಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಸದರಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠ ನಿರ್ಮೂಲನ ಅಧಿಕಾರಿಗಳು ಡಾ|| ಪ್ರಕಾಶ, ಡಾ|| ಪ್ರದೀಪ ಕುಮಾರ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ರೆಡ್ ಕ್ರಾಸ್ ಘಟಕ ಕೊಪ್ಪಳ, ಡಾ|| ಅಶೋಕ ಕುಮಾರ್, ಡಾ. ಹುಲಿಗೆಮ್ಮ ಬಿ ಕನ್ನಡ ಸಹ ಪ್ರಾಧ್ಯಾಪಕರು, ಡಾ|| ನರಸಿಂಹ ಸಹಾಯಕ ಪ್ರಾದ್ಯಾಪಕರು, ಶ್ರೀ ಲಕ್ಷ್ಮಣ ಸಜ್ಜನರ್ ಮೇಲ್ವಿಚಾರಕರು, ಎನ್.ಸಿ.ಡಿ. ಕ್ಲಿನಿಕ್ ಸಿಬ್ಬಂದಿಗಳು, ಜಿಲ್ಲಾ ಎನ್.ಟಿ.ಸಿ.ಪಿ ಕಾರ್ಯಕ್ರಮದ ಸಿಬ್ಬಂದಿಗಳು ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕದ ಎಲ್ಲಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.
ಶ್ರೀ ಶಿವಾನಂದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ನಿರೂಪಣೆ ಮಾಡಿದರು ಡಾ|| ಜಯಶ್ರೀ ಎಮ್.ಹೆಚ್. ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಸ್ವಾಗತ ಭಾಷಣಮಾಡಿ ಕೊನೆಯಲ್ಲಿ ಕಾರ್ಯಕ್ರಮಕ್ಕೆ ಬಾಗವಹಿಸಿದ ಎಲ್ಲಾ ಗಣ್ಯ ವ್ಯಕ್ತಿಗಳಿಗೂ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೂ ಹಾಗೂ ವಿದ್ಯಾರ್ಥಿನಿಯರಿಗೆ ವಂದನೆ ಸಲ್ಲಿಸುತ್ತಾ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ