ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಮುಖ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರಿಂದ ಪಟ್ಟಣದ ಗಾಂಧಿ ಸರ್ಕಲ್ ಹತ್ತಿರ ಇರುವ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು ನಂತರ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪಟ್ಟಣದಲ್ಲಿ ಸ್ವಚ್ಛತೆಯೇ ಸೇವೆ-2024 ಸಸಿ ನೆಡುವ ಕಾರ್ಯಕ್ರಮ ನೆರವೇರಿಸಿ ಗಾಂಧಿರವರ ತತ್ವ ಸಿದ್ದಾಂತಗಳ ಕುರಿತು ಪ್ರತಿಜ್ಞೆ ಮಾಡಲಾಯಿತು. ಹಾಗೂ ಜಯಂತಿ ಕಾರ್ಯಕ್ರಮ ಕುರಿತು ಎ.ನಸರುಲ್ಲಾ ಮುಖ್ಯಾಧಿಕಾರಿಗಳು ಮಾತನಾಡಿ ಗಾಂಧಿಜೀರವರು ಸ್ವತಂತ್ರ ಹೋರಾಟ ಬಗ್ಗೆ ತಿಳಿಸಿ ಅವರ ತತ್ವಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಂಡಿತಾರಾಧ್ಯ, ವಕೀಲರು ಗಾಂಧಿಜಿಯವರು ಕೊಟ್ಟೂರು ಪಟ್ಟಣಕ್ಕೆ ಬೇಟಿ ನೀಡಿದ ಇತಿಹಾಸ, ಸ್ವತಂತ್ರ ಹೋರಾಟಕ್ಕೆ ಕೊಟ್ಟೂರು ಪಟ್ಟಣದ ಕೊಡುಗೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಡಿ.ಎಸ್.ಎಸ್ ಮುಂಖಡರು ಬಿ.ಮರಿಸ್ವಾಮಿ, ಉಪಾಧ್ಯಕ್ಷರಾದ ಜಿ.ಸಿದ್ದಯ್ಯ ಜಯಂತಿ ಕಾರ್ಯಕ್ರಮ ಕುರಿತು ಮಾತನಾಡಿದರು ಹಾಗೂ ಅಧ್ಯಕ್ಷರಾದ ರೇಖಾ ರಮೇಶ್ ರವರು ಭಾಷಣ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭಕೋರಿ, ಯಶಸ್ವಿಗೊಳಿಸಿದ್ದಕ್ಕೆ ಧನ್ಯವಾದ ತಿಳಿಸಿದರು.
ಬೆಳಿಗ್ಗೆ 11.00 ಗಂಟೆಯಿಂದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖ್ಯಾಧಿಕಾರಿಗಳು, ಸಿಬ್ಬಂದಿ ವರ್ಗವದರಿಂದ ಮನೆ-ಮನೆಗೆ ನಮೂನೆ-3 (ಖಾತಾ ಪುರವಣಿ) ವಿತರಿಸಲಾಯಿತು. ನಂತರ ಪಟ್ಟಣದ ಉಜ್ಜಿನಿ ರಸ್ತೆ ನೀರಿನ ಟ್ಯಾಂಕ್ ಹತ್ತಿರ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು ಹಾಗೂ 13ನೇ ವಾರ್ಡ ಗೆ ಭೇಟಿ ನೀಡಿ ಸ್ವಚ್ಚತೆ ಹಾಗೂ ನೀರು ಸರಬರಾಜು ಕುರಿತು ಪರಿಶೀಲನೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.