ವಿಜಯಪುರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘದ ಕುಮಾರಿ ಮೋನಿಕಾ ಬಸವರಾಜ ಕಣ್ಣಿ ಶಿಕ್ಷಣ ಮಹಾವಿದ್ಯಾಲಯ ವಿಜಯಪುರದಲ್ಲಿ 2023-24 ನೆಯ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಉದ್ಘಾಟಕರಾಗಿ ಆಗಮಿಸಿದ ಎಸ್. ಎಸ್. ವಿ ವಿ ಸಂಘದ ಉಪಾಧ್ಯಕ್ಷರಾದ ಶ್ರೀಯುತ ಶಶಿಕುಮಾರ ಬಿ ಕಣ್ಣಿಯವರು ವಿವಿಧ ಕ್ರೀಡಾಕೂಟಗಳನ್ನು ಉದ್ಘಾಟಿಸಿ,ಕ್ರೀಡೆಗಳು ದೈಹಿಕ,ಮಾನಸಿಕ ಸದೃಢತೆಗೆ ಅವಶ್ಯಕವಾಗಿದ್ದು ಕಲಿಕೆಯಲ್ಲಿ ಏಕಾಗ್ರತೆಯನ್ನು ಉಂಟುಮಾಡುವ ಮಹತ್ವದ ಸಾಧನೆಗಳಾಗಿವೆ ಎಂದು ಹೇಳುವುದರ ಮೂಲಕ ಪ್ರಶಿಕ್ಷಣಾರ್ಥಿಗಳಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ಭವಿಷ್ಯತ್ತಿನಲ್ಲಿ ನಿಮ್ಮ ವಿದ್ಯಾರ್ಥಿಗಳನ್ನು ಸದೃಢ ಕ್ರೀಡಾಪಟುಗಳಾಗಿ ರೂಪಗೊಳಿಸಿ ಎಂದು ಶುಭ ಹಾರೈಸಿದರು.ಇದೆ ವೇಳೆ ಕಾಲೇಜಿನ ಪ್ರಾಚಾರ್ಯರಾದ ಡಾ.ರಾಮಚಂದ್ರ ಎನ್ ಮೋರೆ ಯವರು ಮಾತನಾಡಿ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ನಿರ್ಮಾಣಗೊಳ್ಳಲು ಕ್ರೀಡೆಗಳು ಅತ್ಯಂತ ಮಹತ್ವದ್ದಾಗಿದೆ ಹಾಗೂ ವ್ಯಕ್ತಿ ವ್ಯಕ್ತಿಗಳಲ್ಲಿ ಸಹಕಾರ,ಹೊಂದಾಣಿಕೆ,ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಭೋದಕ ಭೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ಹಾಗೂ ದ್ವೀತಿಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.